
Central Bank of India Recruitment 2026 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಫಾರಿನ್ ಎಕ್ಸ್ಚೇಂಜ್ ಆಫೀಸರ್ ಹಾಗೂ ಮಾರ್ಕೆಟಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Central Bank of India Recruitment 2026 : Details of Vacancies
ಹುದ್ದೆ :
ಫಾರಿನ್ ಎಕ್ಸ್ಚೇಂಜ್ ಆಫೀಸರ್, ಮಾರ್ಕೆಟಿಂಗ್ ಆಫೀಸರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 350 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಫಾರಿನ್ ಎಕ್ಸ್ಚೇಂಜ್ ಆಫೀಸರ್ | 50 |
| ಮಾರ್ಕೆಟಿಂಗ್ ಆಫೀಸರ್ | 300 |
ಶೈಕ್ಷಣಿಕ ಅರ್ಹತೆ :
• ಫಾರಿನ್ ಎಕ್ಸ್ಚೇಂಜ್ ಆಫೀಸರ್ – ಪದವಿ, ಸಿಎಫ್ಎ/ಸಿಎ, ಎಂಬಿಎ.
• ಮಾರ್ಕೆಟಿಂಗ್ ಆಫೀಸರ್ – ಪದವಿ/ ಎಂಬಿಎ/ ಪಿಜಿಡಿಬಿಎಂ/ ಪಿಜಿಪಿಎಂ/ ಪಿಜಿಡಿಎಂ.
ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳು ದಿನಾಂಕ 01/01/2026ಕ್ಕೆ ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಫಾರಿನ್ ಎಕ್ಸ್ಚೇಂಜ್ ಆಫೀಸರ್ – ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ
• ಮಾರ್ಕೆಟಿಂಗ್ ಆಫೀಸರ್ – ಕನಿಷ್ಠ 22 ವರ್ಷ, ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
| ಹುದ್ದೆ | ವೇತನ |
| ಫಾರಿನ್ ಎಕ್ಸ್ಚೇಂಜ್ ಆಫೀಸರ್ | ರೂ. 85,920/- – ರೂ. 1,05,280/- |
| ಮಾರ್ಕೆಟಿಂಗ್ ಆಫೀಸರ್ | ರೂ. 48,480/- – ರೂ. 85,920/- |
ಆಯ್ಕೆ ವಿಧಾನ :
• ಆನ್‌ಲೈನ್ ಪರೀಕ್ಷೆ
• ಸಂದರ್ಶನ
ಆನ್‌ಲೈನ್ ಪರೀಕ್ಷೆ –

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು
ಉದ್ಯೋಗ ಮಾಹಿತಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಹಿಳಾ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 20, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 03, 2026 ಫೆಬ್ರವರಿ 15, 2026
• ಆನ್‌ಲೈನ್ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ) : ಫೆಬ್ರವರಿ/ ಮಾರ್ಚ್, 2026
• ಸಂದರ್ಶನ ನಡೆಯುವ ದಿನಾಂಕ (ತಾತ್ಕಾಲಿಕ) : ಮಾರ್ಚ್/ ಏಪ್ರಿಲ್, 2026
Central Bank of India Recruitment 2026 : Important Links
| DATE EXTEND NOTIFICATION | CLICK HERE |
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.