
Central Bank of India SO Recruitment 2026 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Central Bank of India SO Recruitment 2026 : Details of Vacancies
ಹುದ್ದೆ :
ಸ್ಪೆಷಲಿಸ್ಟ್ ಆಫೀಸರ್ (ಸಾಫ್ಟವೇರ್ ಡೆವೆಲಪರ್, ಮೊಬೈಲ್ ಡೆವಲಪರ್, ಡೇಟಾಬೇಸ್ ಅಡ್ಮಿನಿಸ್ಟ್ರೇಷನ್, ಡಿಜಿಟಲ್ ಚಾನೇಲ್ ಮ್ಯಾನೇಜರ್/ ಡಿಜಿಟಲ್ ಅಪ್ಲಿಕೇಷನ್ ಸ್ಪೆಷಲಿಸ್ಟ್, ಕ್ಲೌಡ್ ಮ್ಯಾನೇಜರ್, ಡೇಟಾ ಆರ್ಕಿಟೆಕ್, ಡೇಟಾ ಇಂಜಿನಿಯರ್, ಡೇಟಾ ಸೈಂಟಿಸ್ಟ್, ಜೆನ್ ಎಐ, ಐಟಿ ಆಫೀಸರ್, ರಿಸ್ಕ್ ಮ್ಯಾನೇಜರ್, ಟ್ಯಾಕ್ಸೆಷನ್/ಸಿಎ ಹಾಗೂ ವಿವಿಧ ಹುದ್ದೆಗಳು)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 275 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಬಿಇ/ ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಎಂಸಿಎ, ಬಿಇ/ ಬಿ.ಟೆಕ್ ಇನ್ ಡೇಟಾ ಸೈನ್ಸಸ್, ಡೇಟಾ ಇಂಜಿನಿಯರಿಂಗ್, ಎಐ/ಎಂಎಲ್, ಮಾಸ್ಟರ್ಸ್ ಡಿಗ್ರಿ ಇನ್ ಸ್ಟಾಟಿಸ್ಟಿಕ್/ ಎಕಾನಾಮಿಕ್ಸ್, ಎಂಬಿಎ/ಎಂಎಂಎಸ್ ಇನ್ ಫೈನಾನ್ಸ್, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಬ್ಯಾಂಕಿಂಗ್, ಚಾರ್ಟರ್ಡ್ ಅಕೌಂಟೆಂಟ್ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳು ದಿನಾಂಕ 31/01/2026ಕ್ಕೆ ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
| ಸ್ಕೇಲ್ | ವಯೋಮಾನ |
| ಸ್ಕೇಲ್ IV | ಗರಿಷ್ಠ 45 ವರ್ಷ |
| ಸ್ಕೇಲ್ III | ಗರಿಷ್ಠ 35 ವರ್ಷ |
| ಸ್ಕೇಲ್ II | ಗರಿಷ್ಠ 35 ವರ್ಷ |
| ಸ್ಕೇಲ್ I | ಗರಿಷ್ಠ 30 ವರ್ಷ |
ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
| ಸ್ಕೇಲ್ | ವೇತನ |
| ಚೀಫ್ ಮ್ಯಾನೇಜರ್ (ಸ್ಕೇಲ್ IV) | ರೂ. 1,02,300 – ರೂ. 1,20,940 |
| ಸಿನೀಯರ್ ಮ್ಯಾನೇಜರ್ (ಸ್ಕೇಲ್ III) | ರೂ. 85,920 – ರೂ. 1,05,280 |
| ಮ್ಯಾನೇಜರ್ (ಸ್ಕೇಲ್ II) | ರೂ. 64,820 – ರೂ. 93,960 |
| ಅಸಿಸ್ಟಂಟ್ ಮ್ಯಾನೇಜರ್ (ಸ್ಕೇಲ್ I) | ರೂ. 48,480 – ರೂ. 85,920 |
ಆಯ್ಕೆ ವಿಧಾನ :
• ಆನ್ಲೈನ್ ಪರೀಕ್ಷೆ
• ಸಂದರ್ಶನ
ಆನ್ಲೈನ್ ಪರೀಕ್ಷೆ –

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು.
ಉದ್ಯೋಗ ಮಾಹಿತಿ : ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಹಿಳಾ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 28, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 23, 2026
• ಆನ್ಲೈನ್ ಪರೀಕ್ಷೆ ನಡೆಯುವ ದಿನಾಂಕ : ಏಪ್ರಿಲ್, 2026
• ಸಂದರ್ಶನ ನಡೆಯುವ ದಿನಾಂಕ (ತಾತ್ಕಾಲಿಕ) : ಏಪ್ರಿಲ್, 2026
Central Bank of India SO Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.