Chamarajanagar District Court Recruitment 2022 – Apply Online for 11 Typist, Typist Copyist Posts

Chamarajanagar District Court Recruitment 2022 : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chamarajanagar District Court Recruitment 2022 : Details of Vacancies

ಹುದ್ದೆ : ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಬೆರಳಚ್ಚುಗಾರ7
ಬೆರಳಚ್ಚು ನಕಲುಗಾರ 4

ಶೈಕ್ಷಣಿಕ ಅರ್ಹತೆ :
• ಬೆರಳಚ್ಚುಗಾರ – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಬೆರಳಚ್ಚು ನಕಲುಗಾರ – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದಲ್ಲಿ ನೇರ ನೇಮಕಾತಿ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 01, 2022

Chamarajanagar District Court Recruitment 2022 : Important Links

Typist Notification Click Here
Typist Copyist Notification Click Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment