
Chartered Sahakari Bank Recruitment 2026 : ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಚಾಲಕ ಕಂ ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Chartered Sahakari Bank Recruitment 2026 : Details of Vacancies
ಹುದ್ದೆ :
ಕಿರಿಯ ಸಹಾಯಕರು, ಚಾಲಕ ಕಂ ಅಟೆಂಡರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕಿರಿಯ ಸಹಾಯಕರು | 7 |
| ಚಾಲಕ ಕಂ ಅಟೆಂಡರ್ | 2 |
ಶೈಕ್ಷಣಿಕ ಅರ್ಹತೆ :
ಕಿರಿಯ ಸಹಾಯಕರು –
ಯಾವುದೇ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಚಾಲಕ ಕಂ ಅಟೆಂಡರ್ –
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು ಮೋಟಾರು ವಾಹನದ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ 2026
ವಯೋಮಾನ :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ/ ಪ.ವರ್ಗ/ ಪ್ರ1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಹಿಂದುಳಿದ ಜಾತಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವೇತನ :
| ಹುದ್ದೆ | ವೇತನ |
| ಕಿರಿಯ ಸಹಾಯಕರು | ರೂ. 37,500/- – ರೂ. 76,100/- |
| ಚಾಲಕ ಕಂ ಅಟೆಂಡರ್ | ರೂ. 29,600/- – ರೂ. 52,800/- |
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಚಾಲಕ ಕಂ ಅಟೆಂಡರ್ ಹುದ್ದೆಗೆ ವಾಹನಾ ಚಾಲನಾ ಸಾಮರ್ಥ್ಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು)
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ, ನಂ. 1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು – 560034
ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರ1 ಅಭ್ಯರ್ಥಿಗಳು – ರೂ. 1200
• ಉಳಿದ ಅಭ್ಯರ್ಥಿಗಳು – ರೂ. 2000
ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು “ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ” ಹೆಸರಿಗೆ ಡಿಮ್ಯಾಂಡ್ ಡ್ರಾಪ್ಟ್ ಮೂಲಕ ಅರ್ಜಿಯ ಜೊತೆಯಲ್ಲಿ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 28, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 18, 2026
• ಶುಲ್ಕ ಪಾವತಿಸುವ ಕೊನೆಯ ದಿನಾಂಕ : ಫೆಬ್ರವರಿ 18, 2026
Chartered Sahakari Bank Recruitment 2026 : Important Links
| NOTIFICATION | CLICK HERE |
| APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
| Official Website | csbank.in |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.