Chikballapur District Court Recruitment 2022 : ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Chikballapur District Court Recruitment 2022 : Details of Vacancies
ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 34 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶೀಘ್ರಲಿಪಿಗಾರರು ಗ್ರೇಡ್ 3 | 06 | 27650-52650 |
ಬೆರಳಚ್ಚುಗಾರರು | 01 | 21400-42000 |
ಬೆರಳಚ್ಚು ನಕಲುಗಾರರು | 02 | 21400-42000 |
ಆದೇಶ ಜಾರಿಕಾರರು | 01 | 19950-37900 |
ಜವಾನ | 24 | 17000-28950 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. |
ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. |
ಬೆರಳಚ್ಚುಗಾರ ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಕಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. |
ಆದೇಶ ಜಾರಿಕಾರ ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಲಘು/ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. |
ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. |
ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಪ.ಜಾತಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
• ಆದೇಶ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳು ರೂ. 100
• ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 27, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 30, 2022
Chikballapur District Court Recruitment 2022 : Important Links
Notification | Click Here |
Apply Online | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.