ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023 – Chikkaballapur District Court Recruitment 2023

Chikkaballapur District Court Recruitment 2023 : ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಚಾಲಕ, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkaballapur District Court Recruitment 2023 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಚಾಲಕ, ಆದೇಶ ಜಾರಿಕಾರರು ಹಾಗೂ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಶೀಘ್ರಲಿಪಿಗಾರರು ಗ್ರೇಡ್ 3827650-52650
ಬೆರಳಚ್ಚುಗಾರರು1421400-42000
ಬೆರಳಚ್ಚು ನಕಲುಗಾರರು621400-42000
ಚಾಲಕ121400-42000
ಆದೇಶ ಜಾರಿಕಾರರು1119950-37900
ಜವಾನ517000-28950

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಡದರ್ಜೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪ್ರೌಡದರ್ಜೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪ್ರಥಮದರ್ಜೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ಉದ್ಯೋಗ ಮಾಹಿತಿ – ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಚಾಲಕ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಆದೇಶ ಜಾರಿಕಾರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಉದ್ಯೋಗ ಮಾಹಿತಿ – ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಚಾಲಕ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ಪಂ, ಪ್ರ1 ಅಭ್ಯರ್ಥಿಗಳು – ರೂ. 100
• ಅಂಗವಿಕಲ ಅಭ್ಯರ್ಥಿಗಳು ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 17, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 18, 2024

Chikkaballapur Court Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment