Chikkaballapura Zilla Nirmithi Kendra Recruitment 2022 – Apply for Accountant, Computer Administrator Posts

Chikkaballapura Zilla Nirmithi Kendra Recruitment 2022 : ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಅವಶ್ಯಕವಿರುವ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkaballapura Zilla Nirmithi Kendra Recruitment 2022 : Details of Vacancies

ಹುದ್ದೆ : ಲೆಕ್ಕಿಗರು, ಗಣಕಯಂತ್ರ ನಿರ್ವಾಹಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಲೆಕ್ಕಿಗರು1
ಗಣಕಯಂತ್ರ ನಿರ್ವಾಹಕರು1

ಶೈಕ್ಷಣಿಕ ಅರ್ಹತೆ :
• ಲೆಕ್ಕಿಗರು – ಬಿ.ಕಾಂ/ ಎಂ.ಕಾಂ/ ಎಂ.ಬಿ.ಎ ಪದವೀಧರರಾಗಿರಬೇಕು. ಕನಿಷ್ಠ 3 ವರ್ಷಗಳು ಸಂಘ ಸಂಸ್ಥೆಗಳಲ್ಲಿ ಲೆಕ್ಕಶಾಖೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವವಿರಬೇಕು.
• ಗಣಕಯಂತ್ರ ನಿರ್ವಾಹಕರು – ಯಾವುದೇ ಪದವೀಧರರಾಗಿರಬೇಕು. ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. ಕನಿಷ್ಠ 3 ವರ್ಷಗಳು ಗಣಕಯಂತ್ರ ನಿರ್ವಹಣೆಯಲ್ಲಿ ಕಾರ್ಯನಿರ್ವಾಹಿಸಿರುವ ಅನುಭವವಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಮಾಸಿಕ ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ವೇತನ ನೀಡಲಾಗುವುದು.

ಆಯ್ಕೆ ವಿಧಾನ : ವಿದ್ಯಾರ್ಹತೆ/ ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಐಡಿ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು 10ನೇ ತರಗತಿ ಅಂಕಪಟ್ಟಿ (ವಯಸ್ಸಿನ ದೃಢೀಕರಣಕ್ಕೆ) ಹಾಗೂ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ (Resume, Marks Card & Experience Letter) ಅನುಭವ ಪ್ರಮಾಣ ಪತ್ರಗಳನ್ನು ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಲಗತ್ತಿಸಿ ಈ ಕೆಳಗೆ ನೀಡಲಾಗಿರುವ ಕಛೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : pmcbnk@yahoo.co.in

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 31, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 18, 2022

Chikkaballapura Zilla Nirmithi Kendra Recruitment 2022 : Important Links

NOTIFICATIONCLICK HERE
Telegram Join Link Click Here

ಹೆಚ್ಚಿನ ವಿವರಗಳಿಗೆ ಕಛೇರಿಯ ಸಮಯದಲ್ಲಿ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08156-295080

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment