Chikkamagaluru DCC Bank Recruitment 2024 : ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿಕ್ಕಮಗಳೂರು ಇದರಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Chikkamagaluru DCC Bank Recruitment 2024 : Details of Vacancies
ಹುದ್ದೆ : ಸಹಾಯಕ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು, ಕಿರಿಯ ಸಹಾಯಕರು, ಸಹಾಯಕರು/ ಅಟೆಂಡರ್.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಸಹಾಯಕ ವ್ಯವಸ್ಥಾಪಕರು | 4 |
ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು | 18 |
ಕಿರಿಯ ಸಹಾಯಕರು | 53 |
ಸಹಾಯಕರು/ ಅಟೆಂಡರ್ | 10 |
ಶೈಕ್ಷಣಿಕ ಅರ್ಹತೆ :
• ಸಹಾಯಕ ವ್ಯವಸ್ಥಾಪಕರು – ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
• ಪ್ರಥಮ ದರ್ಜೆ ಸಹಾಯಕರು/ ಮೇಲ್ವಿಚಾರಕರು – ಪದವಿ ಜೊತೆಗೆ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
• ಕಿರಿಯ ಸಹಾಯಕರು – ಪದವಿ ಜೊತೆಗೆ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
• ಸಹಾಯಕರು/ ಅಟೆಂಡರ್ – ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2024
ವಯೋಮಾನ : ದಿನಾಂಕ 27/11/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
ಹುದ್ದೆ | ವೇತನ |
ಸಹಾಯಕ ವ್ಯವಸ್ಥಾಪಕರು | 36000-67550 |
ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು | 27650-52650 |
ಕಿರಿಯ ಸಹಾಯಕರು | 21400-42000 |
ಸಹಾಯಕರು/ ಅಟೆಂಡರ್ | 18600-32600 |
ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ, ಪ್ರ1, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 750
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 29, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 27, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 27, 2024
Chikkamagaluru DCC Bank Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.