ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ 2024 – Chikkamagaluru District Home Guards Recruitment 2024

Chikkamagaluru District Home Guards Recruitment 2024 : ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru District Home Guards Recruitment 2024 : Details of Vacancies

ಹುದ್ದೆ : ಗೃಹರಕ್ಷಕ/ಗೃಹರಕ್ಷಕಿಯರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 247 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : 10ನೇ ತರಗತಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕೆಇಎ ಯಿಂದ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಚಿಕ್ಕಮಗಳೂರು ಜಿಲ್ಲೆಯ ಆಯಾ ಗೃಹರಕ್ಷಕ ಘಟಕಾಧಿಕಾರಿಯವರಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ ವಿಳಾಸ : ಅರ್ಜಿಗಳನ್ನು ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಿಂದ ಹಾಗೂ ಘಟಕಾಧಿಕಾರಿ ಕಛೇರಿ ಗೃಹರಕ್ಷಕ ದಳ, ಚಿಕ್ಕಮಗಳೂರು, ಬೆಳವಾಡಿ, ಕಡೂರು, ಸಖರಾಯಪಟ್ಟಣ, ಕಾಟಿಗನೆರೆ, ಬೀರೂರು, ತರೀಕೆರೆ, ಶಿವನಿ, ಅಜ್ಜಂಪುರ, ಬಾಳೆಹೊನ್ನೂರು, ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಕಳಸಾಪುರ, ಲಿಂಗದಹಳ್ಳಿ, ಹರಿಹರಪುರ, ಜಯಪುರ, ಹೋಚಿಹಳ್ಳಿ, ಮೂಡಿಗೆರೆ ಹಾಗೂ ಜಾವೂರು ಇವರಿಂದ ಉಚಿತವಾಗಿ ಪಡೆಯಬಹುದಾಗಿದೆ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 03, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2024

Karnataka Home Guards Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಇತರೆ ಅರ್ಹತೆ :
• ಗೃಹರಕ್ಷಕ ಸದಸ್ಯರಾಗ ಬಯಸುವವರು ತಮ್ಮ ವಾಸ ಸ್ಥಳದಿಂದ ತಾವು ಸೇರ ಬಯಸುವ ಘಟಕಕ್ಕೆ 6 ಕಿ.ಮೀ. ವ್ಯಾಪ್ತಿಯ ಒಳಗಿರಬೇಕು.
• ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
• ಧೃಢಕಾಯರಾಗಿದ್ದು ಆರೋಗ್ಯವಂತರಾಗಿರಬೇಕು.
• ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment