Chikkamagaluru Gram Panchayat Recruitment 2022 – Apply for 5 Library Supervisor Posts

Chikkamagaluru Gram Panchayat Recruitment 2022 : ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru Gram Panchayat Recruitment 2022 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕು ದೊಡ್ಡಬೋಕಿಕೆರೆ ಗ್ರಾ.ಪಂ ಗ್ರಂಥಾಲಯ (2ಬಿ – ಮಹಿಳೆ), ಶೃಂಗೇರಿ ತಾಲ್ಲೂಕು ಕಿಗ್ಗಾ ಗ್ರಾ.ಪಂ ಗ್ರಂಥಾಲಯ (ಸಾಮಾನ್ಯ ಅಭ್ಯರ್ಥಿ – ಗ್ರಾ.ಅ), ಮೂಡಿಗೆರೆ ತಾಲ್ಲೂಕು ಕಳಸ ಗ್ರಾ.ಪಂ ಗ್ರಂಥಾಲಯ (2ಎ – ಯೋ.ಅ), ಕೊಪ್ಪ ತಾಲ್ಲೂಕು ನಿಲುವಾಗಿಲು ಗ್ರಾ.ಪಂ ಗ್ರಂಥಾಲಯ (3ಬಿ – ಗ್ರಾ.ಅ), ಕಡೂರು ತಾಲ್ಲೂಕು ಅಂತರಘಟ್ಟೆ ಗ್ರಾ.ಪಂ ಗ್ರಂಥಾಲಯದಲ್ಲಿ (ಸಾಮಾನ್ಯ ಅಭ್ಯರ್ಥಿ – ಮಾ.ಸೈ) ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇರ ನೇಮಕಾತಿ 2022

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12 ಸಾವಿರ ಗೌರವ ಸಂಭಾವನೆ ನೀಡಲಾಗುತ್ತದೆ.

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯ್ತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಮೂಲಕ ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಭ್ಯರ್ಥಿಗಳಾಗಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 03, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2022

Chikkamagaluru Gram Panchayat Recruitment 2022 : Important Links

ಪ್ರಕಟಣೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment