Chikkamagaluru Zilla Panchayat Recruitment 2021 : ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Chikkamagaluru Zilla Panchayat Recruitment 2021 : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru Zilla Panchayat Recruitment 2021 : Details of Vacancies

ಹುದ್ದೆ : ಗ್ರಾಮ ಕಾಯಕ ಮಿತ್ರ (ಮಹಿಳೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಚಿಕ್ಕಮಗಳೂರು ಜಿಲ್ಲೆಯ ಒಟ್ಟು 39 ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಓದು, ಬರಹ ಚೆನ್ನಾಗಿ ತಿಳಿದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6000 ಗೌರವಧನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.

ಉದ್ಯೋಗ ಮಾಹಿತಿ : ಪೊಲೀಸ್ ಇಲಾಖೆ ನೇಮಕಾತಿ 2021

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಅರ್ಜಿಯನ್ನು ನೇರವಾಗಿ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಸಲ್ಲಿಸುವುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಈ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 03, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 09, 2021

Chikkamagaluru Zilla Panchayat Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿಯಿರುವ ಚಿಕ್ಕಮಗಳೂರು ಜಿಲ್ಲೆಯ ಆಯಾ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಿ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.