Chikkamagaluru Zilla Panchayat Recruitment 2021 : ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Chikkamagaluru Zilla Panchayat Recruitment 2021 : ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru Zilla Panchayat Recruitment 2021 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು ಹುದ್ದೆಗೆ ಬಿ.ಎಸ್ಸಿ (ಅರಣ್ಯ) ಅಥವಾ ಸಮಾನಾಂತರ ಸಂಬಂಧಿಸಿದ ಅರ್ಹತೆ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಸಿವಿಲ್) ಹಾಗೂ ತಾಂತ್ರಿಕ ಸಂಯೋಜಕರು ಹುದ್ದೆಗೆ ಬಿಇ/ ಬಿಟೆಕ್ (ಸಿವಿಲ್ ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.

ಅನುಭವ : ಅಭ್ಯರ್ಥಿಗಳು ಕನಿಷ್ಠ 2-3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಡೇಟಾ ಎಂಟ್ರಿ ಆಪರೇಟರ್, ಡ್ರೈವರ್, ಪಿಯೋನ್ ಹುದ್ದೆಗಳ ನೇಮಕಾತಿ

ವಯೋಮಾನ :

ಹುದ್ದೆಗರಿಷ್ಠ ವಯೋಮಾನ
ತಾಂತ್ರಿಕ ಸಹಾಯಕರು (ಅರಣ್ಯ)40 ವರ್ಷ
ತಾಂತ್ರಿಕ ಸಹಾಯಕರು (ಸಿವಿಲ್)45 ವರ್ಷ
ತಾಂತ್ರಿಕ ಸಂಯೋಜಕರು50 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ರಿಂದ ರೂ. 29,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 07, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 19, 2021

Chikkamagaluru Zilla Panchayat Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.