Chikkamagaluru Zilla Panchayat Recruitment 2021 : ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Chikkamagaluru Zilla Panchayat Recruitment 2021 : Details of Vacancies
ಹುದ್ದೆ : ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಂಯೋಜಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು ಹುದ್ದೆಗೆ ಬಿ.ಎಸ್ಸಿ (ಅರಣ್ಯ) ಅಥವಾ ಸಮಾನಾಂತರ ಸಂಬಂಧಿಸಿದ ಅರ್ಹತೆ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಸಿವಿಲ್) ಹಾಗೂ ತಾಂತ್ರಿಕ ಸಂಯೋಜಕರು ಹುದ್ದೆಗೆ ಬಿಇ/ ಬಿಟೆಕ್ (ಸಿವಿಲ್ ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.
ಅನುಭವ : ಅಭ್ಯರ್ಥಿಗಳು ಕನಿಷ್ಠ 2-3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಡೇಟಾ ಎಂಟ್ರಿ ಆಪರೇಟರ್, ಡ್ರೈವರ್, ಪಿಯೋನ್ ಹುದ್ದೆಗಳ ನೇಮಕಾತಿ
ವಯೋಮಾನ :
ಹುದ್ದೆ | ಗರಿಷ್ಠ ವಯೋಮಾನ |
ತಾಂತ್ರಿಕ ಸಹಾಯಕರು (ಅರಣ್ಯ) | 40 ವರ್ಷ |
ತಾಂತ್ರಿಕ ಸಹಾಯಕರು (ಸಿವಿಲ್) | 45 ವರ್ಷ |
ತಾಂತ್ರಿಕ ಸಂಯೋಜಕರು | 50 ವರ್ಷ |
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ರಿಂದ ರೂ. 29,000 ವರೆಗೂ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 07, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 19, 2021
Chikkamagaluru Zilla Panchayat Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.