ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ 2023 – Chikkamagaluru Zilla Panchayat Recruitment 2023 Apply Online at Chikkamagaluru.nic.in

Chikkamagaluru Zilla Panchayat Recruitment 2023 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru Zilla Panchayat Recruitment 2023 : Details of Vacancies

ಹುದ್ದೆ : ತಾಲೂಕು ಎಂಐಎಸ್ ಸಂಯೋಜಕ, ತಾಂತ್ರಿಕ ಸಂಯೋಜಕ, ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ಆಡಳಿತ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಲೂಕು ಎಂಐಎಸ್ ಸಂಯೋಜಕ2
ತಾಂತ್ರಿಕ ಸಂಯೋಜಕ1
ತಾಂತ್ರಿಕ ಸಹಾಯಕರು (ಸಿವಿಲ್)1
ತಾಂತ್ರಿಕ ಸಹಾಯಕರು (ಕೃಷಿ, ತೋಟಗಾರಿಕೆ)4
ತಾಂತ್ರಿಕ ಸಹಾಯಕರು (ಅರಣ್ಯ)5
ಆಡಳಿತ ಸಹಾಯಕರು5

ಶೈಕ್ಷಣಿಕ ಅರ್ಹತೆ :
ತಾಲೂಕು ಎಂಐಎಸ್ ಸಂಯೋಜಕ – ಎಂಸಿಎ ಅಥವಾ ಬಿಇ ಇನ್ ಕಂಪ್ಯೂಟರ್/ ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಪದವಿ ಅಥವಾ ತತ್ಸಮಾನ ಪದವಿ.

ತಾಂತ್ರಿಕ ಸಂಯೋಜಕ & ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ/ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್ ಪದವಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ)

ಆಡಳಿತ ಸಹಾಯಕರು – ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ಆಯುಷ್ ಕಛೇರಿಯಲ್ಲಿ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 16, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 25, 2023

Chikkamagaluru Zilla Panchayat Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment