Chitradurga Gram Panchayat Recruitment 2022 – Apply for Various Library Supervisor Post

Chitradurga Gram Panchayat Recruitment 2022 : ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chitradurga Gram Panchayat Recruitment 2022 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಿ-ದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ, ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಹುದ್ದೆ ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ರೂ. 12,000 ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ಆಯಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಥವಾ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ., ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 10, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 04, 2022

Chitradurga Gram Panchayat Recruitment 2022 : Important Links

ಅಧಿಸೂಚನೆ & ಅರ್ಜಿ ನಮೂನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment