Chitradurga Zilla Panchayat Recruitment 2022 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Chitradurga Zilla Panchayat Recruitment 2022 : Details of Vacancies
ಹುದ್ದೆ :
1) ಡಾಟಾ ಎಂಟ್ರಿ ಆಪರೇಟರ್ – 06 ಹುದ್ದೆ
ಪಿಯುಸಿ ವಿದ್ಯಾರ್ಹತೆ ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
2) ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 01 ಹುದ್ದೆ
ಬಿ.ಕಾಂ ಪದವಿ ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
3) ಟೆಕ್ನಿಕಲ್ ಕೋ-ಆರ್ಡಿನೇಟರ್ – 01 ಹುದ್ದೆ
ಬಿಇ (ಸಿವಿಲ್) ಪದವಿ ಹೊಂದಿರಬೇಕು ಹಾಗೂ ನರೇಗಾ ಯೋಜನೆಯಡಿ 05 ವರ್ಷಗಳ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ.
4) ತಾಂತ್ರಿಕ ಸಹಾಯಕರು (ಅರಣ್ಯ) – 02 ಹುದ್ದೆ
ಬಿ.ಎಸ್ಸಿ (ಅರಣ್ಯ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ :
ಹುದ್ದೆ | ವೇತನ |
ಡಾಟಾ ಎಂಟ್ರಿ ಆಪರೇಟರ್ | 17,600 |
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ | 18,000 |
ಟೆಕ್ನಿಕಲ್ ಕೋ-ಆರ್ಡಿನೇಟರ್ | 29,000 |
ತಾಂತ್ರಿಕ ಸಹಾಯಕರು | 24,000 |
ಉದ್ಯೋಗ ಮಾಹಿತಿ : ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ನೇರ ನೇಮಕಾತಿ 2022
ವಯೋಮಾನ : ದಿನಾಂಕ 31/07/2022ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಡಾಟಾ ಎಂಟ್ರಿ ಆಪರೇಟರ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಟೆಕ್ನಿಕಲ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವುದನ್ನು ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ ನೇರ ನೇಮಕಾತಿ 2022
ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 24, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 08, 2022
Chitradurga Zilla Panchayat Recruitment 2022 : Important Links
Notification | Click Here |
Apply Online | Click Here |
ಹೆಚ್ಚಿನ ಮಾಹಿತಿಗಾಗಿ 08194-223058 ನ್ನು ಸಂಪರ್ಕಿಸಬಹುದು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.