CISF Recruitment 2022 – Apply Online for 540 Head Constable (Ministerial), ASI (Stenographer) Posts

CISF Recruitment 2022 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CISF Recruitment 2022 : Details of Vacancies

ಹುದ್ದೆ : ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್), ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 540 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಹೆಡ್ ಕಾನ್ಸ್‌ಟೇಬಲ್‌41825,500-81,100
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್12229,200-92,300

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2/ ಸೀನಿಯರ್ ಸೆಕೆಂಡರಿ ಎಜುಕೇಷನ್‌ ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಟೈಪಿಂಗ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಲ ಸಂಪನ್ಮೂಲ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ 2022

ವಯೋಮಾನ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ, Skill Test ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ರೂ. 100 ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 26, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 25, 2022

CISF Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment