ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025 – CISF Recruitment 2025

CISF Recruitment 2025 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌/ ಡ್ರೈವರ್, ಕಾನ್ಸ್‌ಟೇಬಲ್‌/ (ಡ್ರೈವರ್ ಕಂ ಪಂಪ್ ಆಪರೇಟರ್) ತಾತ್ಕಾಲಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CISF Recruitment 2025 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌/ ಡ್ರೈವರ್, ಕಾನ್ಸ್‌ಟೇಬಲ್‌/ (ಡ್ರೈವರ್ ಕಂ ಪಂಪ್ ಆಪರೇಟರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1124 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಾನ್ಸ್‌ಟೇಬಲ್‌/ ಡ್ರೈವರ್845
ಕಾನ್ಸ್‌ಟೇಬಲ್‌/ (ಡ್ರೈವರ್ ಕಂ ಪಂಪ್ ಆಪರೇಟರ್)279

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಲಘು, ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ 32438 ಹುದ್ದೆಗಳ ಬೃಹತ್ ನೇಮಕಾತಿ 2025

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಪಿ.ಇ.ಟಿ/ ಪಿ.ಎಸ್.ಟಿ, ದಾಖಲೆಗಳ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ದೇಹದಾರ್ಢ್ಯತೆ – ಎತ್ತರ 167 ಸೆಂ.ಮೀ., ಎದೆ ಸುತ್ತಳತೆ 80-85 ಸೆಂ.ಮೀ. (ಕನಿಷ್ಠ ವಿಸ್ತರಣೆ 5 ಸೆಂ.ಮೀ.)

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು.
• ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಚಲನ್ ಮೂಲಕ ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರವರಿ 03, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 04, 2025

CISF Recruitment 2025 : Important Links

NOTIFICATIONCLICK HERE
APPLY ONLINE CLICK HERE ಫೆಬ್ರವರಿ 03 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment