
CMS Bank Recruitment 2026 : ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
CMS Bank Recruitment 2026 : Details of Vacancies
ಹುದ್ದೆ :
ಕಿರಿಯ ಸಹಾಯಕರು, ಸಿಪಾಯಿ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕಿರಿಯ ಸಹಾಯಕರು | 5 |
| ಸಿಪಾಯಿ | 5 |
ಶೈಕ್ಷಣಿಕ ಅರ್ಹತೆ :
ಕಿರಿಯ ಸಹಾಯಕರು –
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಹೊಂದಿರಬೇಕು. ಬಿ.ಕಾಂ/ ಬಿ.ಎಸ್ಸಿ/ ಬಿಸಿಎ/ ಬಿಬಿಎ/ ಬಿಇ ಪದವೀಧರರಿಗೆ ಪ್ರಾತಿನಿಧ್ಯ ನೀಡಲಾಗುವುದು.
ಸಿಪಾಯಿ –
ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಉದ್ಯೋಗ ಮಾಹಿತಿ : ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ 2026
ವಯೋಮಾನ :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವೇತನ :
| ಹುದ್ದೆ | ವೇತನ |
| ಕಿರಿಯ ಸಹಾಯಕರು | ರೂ. 27,650 – ರೂ. 52,650 |
| ಸಿಪಾಯಿ | ರೂ. 19,950 – ರೂ. 37,900 |
ಆಯ್ಕೆ ವಿಧಾನ :
• ಲಿಖಿತ ಪರೀಕ್ಷೆ
• ಸಂದರ್ಶನ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ, ವಿಜಯಪುರ – 586101
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ರೂ. 1000
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – ರೂ. 500
ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು “ವ್ಯವಸ್ಥಾಪಕರು, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ” ಹೆಸರಿಗೆ ಡಿ.ಡಿ ಮೂಲಕ ಪಡೆದು ಅರ್ಜಿಯ ಜೊತೆಯಲ್ಲಿ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 16, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 10, 2026
CMS Bank Vijayapura Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.