Cooperative Society Recruitment 2021 – Apply Now 08 Post

Cooperative Society Recruitment 2021 : ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Cooperative Society Recruitment 2021 : Details of Vacancies

ಹುದ್ದೆ : ಕಿರಿಯ ಸಹಾಯಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎ/ ಬಿ.ಎಸ್.ಸಿ/ ಬಿ.ಸಿ.ಎ/ ಬಿ.ಕಾಂ/ ಬಿ.ಬಿ.ಎಂ/ ಬಿ.ಬಿ.ಎ ಯಾವುದಾದರೂ ಪದವಿಯಲ್ಲಿ ಕನಿಷ್ಠ ಶೇಕಡಾ 50% ಹಾಗೂ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾ/ಪ.ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2021

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ, ಪೂರಕ ದಾಖಲೆಗಳ ನಕಲು ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 1000 ಡಿಡಿಯನ್ನು ಸಿ.ರೈ.ಸೇ.ಸ.ಸಂಘ ನಿಯಮಿತ, ಅತ್ತಿಬೆಲೆ, ಇವರ ಹೆಸರಿನಲ್ಲಿ ನೀಡಿ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತ, ಅತ್ತಿಬೆಲೆ 562107, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ
ಮೊ. 9886621722

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 14, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 01, 2021

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು :
• ಸ್ವಹಸ್ತಾಕ್ಷರವಿರುವ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಅಂಟಿಸಬೇಕು.
• ಆಧಾರ್ ಕಾರ್ಡ್/ ವೋಟರ್ ಐಡಿ/ ಪಾನ್ ಕಾರ್ಡ್/ ಪಾಸ್ ಪೋರ್ಟ್ ಲಗತ್ತಿಸಬೇಕು.
• ವಯಸ್ಸು ದೃಢೀಕರಣ ಕುರಿತು ಹತ್ತನೇ ತರಗತಿ ಅಂಕಪಟ್ಟಿ/ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಲಗತ್ತಿಸಬೇಕು.
• ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಎಲ್ಲಾ ವರ್ಷಗಳ ಪದವಿ ಅಂಕಪಟ್ಟಿ ಲಗತ್ತಿಸಬೇಕು.
• ಕಂಪ್ಯೂಟರ್ ತರಬೇತಿ ಹೊಂದಿದ ಕುರಿತು ಸರ್ಟಿಫಿಕೇಟ್ ಲಗತ್ತಿಸಬೇಕು.
• ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಸಂಬಂಧಿಸಿದ ಪ್ರಾಧಿಕಾರದಿಂದ ಪಡೆದ ಇತ್ತೀಚಿನ ಪ್ರಮಾಣ ಪತ್ರ ಲಗತ್ತಿಸಬೇಕು

Cooperative Society Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment