ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ 2026 – CRPF Constable Recruitment 2026

CRPF Constable Recruitment 2026

CRPF Constable Recruitment 2026 : ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್ ಮತ್ತು ಪಯೋನೀರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CRPF Constable Recruitment 2026 : Details of Vacancies

ಹುದ್ದೆ :

ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್ ಮತ್ತು ಪಯೋನೀರ್) ಪುರುಷ/ ಮಹಿಳೆ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 9175 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 471 ಹುದ್ದೆಗಳು ಖಾಲಿ ಇದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಕಾನ್ಸ್‌ಟೇಬಲ್‌ (ಡ್ರೈವರ್) –

10ನೇ ತರಗತಿ ಜೊತೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಕಾನ್ಸ್‌ಟೇಬಲ್‌ (ಮೆಕ್ಯಾನಿಕ್ ಮೋಟರ್ ವೆಹಿಕಲ್) –

10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಜೊತೆಗೆ ಮೆಕ್ಯಾನಿಕ್ ಮೋಟರ್ ವೆಹಿಕಲ್ ನಲ್ಲಿ 2 ವರ್ಷಗಳ ಐಟಿಐ ಸರ್ಟಿಫಿಕೇಟ್ ಹೊಂದಿರಬೇಕು.

ಕಾನ್ಸ್‌ಟೇಬಲ್‌ (ಟ್ರೇಡ್ಸ್‌ಮೆನ್) –

10ನೇ ತರಗತಿ ಜೊತೆಗೆ ಆಯಾ ಟ್ರೇಡ್‌ಗಳಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.

ಕಾನ್ಸ್‌ಟೇಬಲ್‌ ಪಯೋನೀರ್ ವಿಂಗ್ (ಮೇಸನ್/ಎಲೆಕ್ಟ್ರಿಷಿಯನ್) –

10ನೇ ತರಗತಿ ಜೊತೆಗೆ ಆಯಾ ಟ್ರೇಡ್‌ಗಳಲ್ಲಿ 1 ವರ್ಷದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ 2026

ವಯೋಮಾನ :

ದಿನಾಂಕ 01/01/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕಾನ್ಸ್‌ಟೇಬಲ್‌ (ಡ್ರೈವರ್) – ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ
• ಕಾನ್ಸ್‌ಟೇಬಲ್‌ (ಉಳಿದ ಹುದ್ದೆ) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ

ವಯೋಮಿತಿ ಸಡಿಲಿಕೆ :

• ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಫಿಸಿಕಲ್ ಎಫಿಷಿಯೆನ್ಸಿ ಟೆಸ್ಟ್ (PET)
• ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
• ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
• ಟ್ರೇಡ್ ಟೆಸ್ಟ್/ ಸ್ಕಿಲ್ ಟೆಸ್ಟ್
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 100
• ಎಸ್ಸಿ, ಎಸ್ಟಿ, ಮಹಿಳಾ, ಮಾ.ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ಶುಲ್ಕ ಪಾವತಿಸುವ ವಿಧಾನ :

ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 20, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 19, 2026

CRPF Constable Tradesman Recruitment 2026 : Important Links

NOTIFICATIONCLICK HERE
APPLY ONLINE CLICK HERE ಏಪ್ರಿಲ್ 20 ರಿಂದ ಪ್ರಾರಂಭ
Telegram Group Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment