CRPF Recruitment 2023 – Apply Online for 212 SI, ASI Posts

CRPF Recruitment 2023 : ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಸಬ್‌ ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CRPF Recruitment 2023 : Details of Vacancies

ಹುದ್ದೆ : ಸಬ್‌ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್, ಕ್ರಿಪ್ಟೋ, ಟೆಕ್ನಿಕಲ್, ಸಿವಿಲ್), ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಟೆಕ್ನಿಕಲ್, ಡ್ರಾಪ್ಟ್ ಮನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 212 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಬ್‌ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್)1935400-112400
ಸಬ್‌ ಇನ್ಸ್‌ಪೆಕ್ಟರ್ (ಕ್ರಿಪ್ಟೋ)735400-112400
ಸಬ್‌ ಇನ್ಸ್‌ಪೆಕ್ಟರ್ (ಟೆಕ್ನಿಕಲ್)535400-112400
ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್)2035400-112400
ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಟೆಕ್ನಿಕಲ್)14629200-92300
ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಡ್ರಾಪ್ಟ್ ಮನ್)1529200-92300

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಸಬ್‌ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ಗಣಿತ, ಭೌತಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್)

• ಸಬ್‌ ಇನ್ಸ್‌ಪೆಕ್ಟರ್ (ಕ್ರಿಪ್ಟೋ) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ಗಣಿತ ಮತ್ತು ಭೌತಶಾಸ್ತ್ರ)

• ಸಬ್‌ ಇನ್ಸ್‌ಪೆಕ್ಟರ್ (ಟೆಕ್ನಿಕಲ್) – ಬಿಇ/ ಬಿ.ಟೆಕ್ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ಇಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಷನ್ ಅಥವಾ ಕಂಪ್ಯೂಟರ್ ಸೈನ್ಸ್)

• ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ) – 12ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಸಿವಿಲ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

• ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಟೆಕ್ನಿಕಲ್) – 10ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಇನ್ ರೇಡಿಯೋ ಇಂಜಿನಿಯರಿಂಗ್ ಅಥವಾ ಇಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಅಥವಾ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ವಿಷಯದಲ್ಲಿ ಬಿಎಸ್ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

• ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಡ್ರಾಪ್ಟ್ ಮನ್) – 10ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಇನ್ ಡ್ರಾಪ್ಟ್ ಮನ್ ಕೋರ್ಸ್ (ಸಿವಿಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ
• ಸಬ್‌ ಇನ್ಸ್‌ಪೆಕ್ಟರ್ (ರೇಡಿಯೋ ಆಪರೇಟರ್, ಕ್ರಿಪ್ಟೋ, ಟೆಕ್ನಿಕಲ್) – ಗರಿಷ್ಠ 30 ವರ್ಷ
• ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್) – ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ
• ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಟೆಕ್ನಿಕಲ್, ಡ್ರಾಪ್ಟ್ ಮನ್) – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ/ ದೇಹದಾರ್ಢ್ಯತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೀದರ್, ಚಿಕ್ಕಮಗಳೂರು, ಧಾರವಾಡ, ಗುಲ್ಬರ್ಗ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
• ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ – ರೂ. 200
• ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 01, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 21, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಪ್ರಕಟಿಸುವ ದಿನಾಂಕ : ಜೂನ್ 13, 2023 ರಿಂದ ಪರೀಕ್ಷಾ ದಿನಾಂಕದವರೆಗೆ
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಜೂನ್ 24, 2023 ರಿಂದ ಜೂನ್ 25, 2023

CRPF Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment