CRPF Recruitment 2023 – Apply Online for 9223 Constable Technical and Tradesmen Posts

CRPF Recruitment 2023 : ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್‌)ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CRPF Recruitment 2023 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್) ಪುರುಷ ಹಾಗೂ ಮಹಿಳೆ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 9223 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 466 ಹುದ್ದೆಗಳು ಖಾಲಿ ಇದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಕಾನ್ಸ್‌ಟೇಬಲ್‌ (ಡ್ರೈವರ್) – 10ನೇ ತರಗತಿ ಜೊತೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.
• ಕಾನ್ಸ್‌ಟೇಬಲ್‌ (ಮೆಕ್ಯಾನಿಕ್ ಮೋಟರ್ ವೆಹಿಕಲ್) – 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಜೊತೆಗೆ ಮೆಕ್ಯಾನಿಕ್ ಮೋಟರ್ ವೆಹಿಕಲ್ ನಲ್ಲಿ 2 ವರ್ಷಗಳ ಐಟಿಐ ಸರ್ಟಿಫಿಕೇಟ್ ಹೊಂದಿರಬೇಕು.
• ಟ್ರೇಡ್ಸ್‌ಮೆನ್ – 10ನೇ ತರಗತಿ ಜೊತೆಗೆ ಆಯಾ ಟ್ರೇಡ್‌ಗಳಲ್ಲಿ ಪ್ರವೀಣರಾಗಿರಬೇಕು ಮತ್ತು ಕೆಲಸ ಮಾಡಬೇಕು.
• ಕಾನ್ಸ್‌ಟೇಬಲ್‌ (ಮೇಸನ್/ಪ್ಲಂಬರ್/ಎಲೆಕ್ಟ್ರಿಷಿಯನ್) – 10ನೇ ತರಗತಿ ಜೊತೆಗೆ ಆಯಾ ಟ್ರೇಡ್‌ಗಳಲ್ಲಿ 1 ವರ್ಷದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿ 2023

ವಯೋಮಾನ : ದಿನಾಂಕ 01/08/2023ಕ್ಕೆ
• ಕಾನ್ಸ್‌ಟೇಬಲ್‌(ಡ್ರೈವರ್) – ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ
• ಕಾನ್ಸ್‌ಟೇಬಲ್‌ (ಉಳಿದ ಹುದ್ದೆ) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಟ್ರೇಡ್ ಟೆಸ್ಟ್, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಕಂಪ್ಯೂಟರ್ ಆಧಾರಿತ ಪರೀಕ್ಷಾ ಕೇಂದ್ರಗಳು : ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಕಲಬುರಗಿ ಗುಲ್ಬರ್ಗ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಪುತ್ತೂರು, ಶಿವಮೊಗ್ಗ, ತುಮಕೂರು, ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 27, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 25, 2023 ಮೇ 02, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಪ್ರಕಟಿಸುವ ದಿನಾಂಕ : ಜೂನ್ 20, 2023 ರಿಂದ ಜೂನ್ 25, 2023
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಜುಲೈ 01, 2023 ರಿಂದ ಜುಲೈ 13, 2023

CRPF Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment