Dakshina Kannada Zilla Panchayat Recruitment 2024 : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಕೌಶಲ್ಯ ಮಿಷನ್, ಇಲ್ಲಿ ಕಾರ್ಯನಿರ್ವಹಿಸಲು ಮಲ್ಟಿಟಾಸ್ಕಿಂಗ್ ಅಫಿಷಿಯಲ್ಸ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಯ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Dakshina Kannada Zilla Panchayat Recruitment 2024 : Details of Vacancies
ಹುದ್ದೆ : ಮಲ್ಟಿಟಾಸ್ಕಿಂಗ್ ಅಫಿಷಿಯಲ್ಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದಕ್ಷಿಣ ಕನ್ನಡ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದ ಪದವಿಯೊಂದಿಗೆ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕಂಪ್ಯೂಟರ್ ಜ್ಞಾನ, ಎಂ.ಎಸ್. ವರ್ಡ್, ಎಕ್ಸೆಲ್, ಪಿ.ಪಿ.ಟಿ ಬಗ್ಗೆ ಪರಿಣಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಣತಿ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಉದ್ಯೋಗ ಮಾಹಿತಿ : NIACL ಇಂದ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ 2025
ವಯೋಮಾನ : ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ರಿಂದ 30,000 ವೇತನ ನೀಡಲಾಗುತ್ತದೆ.
ಅನುಭವ : ಕನಿಷ್ಠ 3 ವರ್ಷಗಳ ಸೇವಾನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಇ-ಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅಪ್ಲಿಕೇಷನ್ ಸ್ವ-ವಿವರದ (Resume) ಪ್ರತಿ, ವಿದ್ಯಾರ್ಹತೆ ಹಾಗೂ ಅನುಭವ ಮುಂತಾದ ಅಗತ್ಯ ದಾಖಲೆಗಳನ್ನು ಪಿಡಿಎಫ್ ಸ್ಕ್ಯಾನ್ ಮಾಡಿ ಈ ಕೆಳಗಡೆ ನೀಡಲಾಗಿರುವ ಕಛೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಇ-ಮೇಲ್ ವಿಳಾಸ : skillmnglr@gmail.com
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 13, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 30, 2024
Dakshina Kannada Zilla Panchayat Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.