Davanagere District Court Recruitment 2022 : ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Davanagere District Court Recruitment 2022 : Details of Vacancies
ಹುದ್ದೆ : ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಜವಾನ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 31 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಬೆರಳಚ್ಚುಗಾರ | 07 |
ಬೆರಳಚ್ಚು ನಕಲುಗಾರ | 02 |
ಜವಾನ | 22 |
ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. |
ಬೆರಳಚ್ಚು ನಕಲುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. |
ಜವಾನ ಹುದ್ದೆಗೆ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕನ್ನಡ ಭಾಷೆಯನ್ನು ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು. |
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ :
ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು |
ಜವಾನ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು |
ಉದ್ಯೋಗ ಮಾಹಿತಿ : ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ದಾವಣಗೆರೆ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 19, 2022
Davanagere District Court Recruitment 2022 : Important Links
ಬೆರಳಚ್ಚುಗಾರ (ಅಧಿಸೂಚನೆ) | Click Here |
ಬೆರಳಚ್ಚು ನಕಲುಗಾರ (ಅಧಿಸೂಚನೆ) | Click Here |
ಜವಾನ (ಅಧಿಸೂಚನೆ) | Click Here |
ಅರ್ಜಿ ಸಲ್ಲಿಸಿ | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
1 thought on “Davanagere District Court Recruitment 2022 – Apply Online for 31 Typist, Peon Posts”
🙏🙏🙏🙏🙏🙏🙏🙏