Davangere DCC Bank Recruitment 2022 – Apply Online for 48 JA, Driver and Various Posts

Davangere DCC Bank Recruitment 2022 : ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ದಾವಣಗೆರೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Davangere DCC Bank Recruitment 2022 : Details of Vacancies

ಹುದ್ದೆ : ಕಿರಿಯ ಸಹಾಯಕರು/ಕಿರಿಯ ಕ್ಷೇತ್ರಾಧಿಕಾರಿಗಳು, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ಕಿರಿಯ ಸೇವಕರು (ಅಟೆಂಡರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಕಿರಿಯ ಸಹಾಯಕರು2930350-58250
ಕಂಪ್ಯೂಟರ್ ಇಂಜಿನಿಯರ್133450-62600
ಕಂಪ್ಯೂಟರ್ ಆಪರೇಟರ್130350-58250
ವಾಹನ ಚಾಲಕರು127650-52650
ಕಿರಿಯ ಸೇವಕರು1623500-47650

ಶೈಕ್ಷಣಿಕ ಅರ್ಹತೆ :

ಕಿರಿಯ ಸಹಾಯಕರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಹಾಗೂ ಸಹಕಾರ ವಿಷಯದಲ್ಲಿ ಅಧ್ಯಯನ, ಜ್ಞಾನ ಮತ್ತು ಅನುಭವ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಕಂಪ್ಯೂಟರ್ ಇಂಜಿನಿಯರ್ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಪ್ರೊಗ್ರಾಮರ್, ಬಿ.ಇ. ಸಿ.ಎಸ್., ಇ&ಸಿ, ಇ&ಇ ಇಂಜಿನಿಯರಿಂಗ್/ ಎಂ.ಸಿ.ಎ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಆಪರೇಟರ್ – ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಉತ್ತೀರ್ಣರಾಗಿರಬೇಕು.
ವಾಹನ ಚಾಲಕರು – ಕನಿಷ್ಠ 10ನೇ ತರಗತಿ/ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಊರ್ಜಿತ ಲಘು ವಾಹನ ಚಾಲನೆಯ ಲೈಸೆನ್ಸ್, ಬ್ಯಾಡ್ಜ್ ಹೊಂದಿರತಕ್ಕದ್ದು.
ಕಿರಿಯ ಸೇವಕರು (ಅಟೆಂಡರ್) – ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ನೇಮಕಾತಿ 2022

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 01, 2022

Davangere DCC Bank Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment