DC Office Udupi Recruitment 2022 – Apply for 41 Loaders and Cleaners Posts

DC Office Udupi Recruitment 2022 : ಉಡುಪಿ ಜಿಲ್ಲೆಯ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಕನಿಷ್ಠ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DC Office Udupi Recruitment 2022 : Details of Vacancies

ಹುದ್ದೆ : ಲೋಡರ್ಸ್ ಮತ್ತು ಕ್ಲೀನರ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಲೋಡರ್ಸ್33
ಕ್ಲೀನರ್ಸ್08

ಕನಿಷ್ಠ ಅರ್ಹತೆ : ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್ ಅಥವಾ ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಕನಿಷ್ಠ 2 ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಾನ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ರವರೆಗೂ ವೇತನ ನೀಡಲಾಗುತ್ತದೆ

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ ವಿಳಾಸ : ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಛೇರಿ, ಉಡುಪಿ ಮತ್ತು ಆಯಾ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಛೇರಿ, ಉಡುಪಿ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 21, 2022

DC Office Udupi Recruitment 2022 : Important Links

ಅಧಿಸೂಚನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment