Dharwad District Court Recruitment 2023 – Apply Online for 33 Typist Copyist, Peon Posts

Dharwad District Court Recruitment 2023 : ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dharwad District Court Recruitment 2023 : Details of Vacancies

ಹುದ್ದೆ : ಬೆರಳಚ್ಚು ನಕಲುಗಾರರು, ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಬೆರಳಚ್ಚು ನಕಲುಗಾರರು221400-42000
ಜವಾನ3117000-28950

ಶೈಕ್ಷಣಿಕ ಅರ್ಹತೆ :
• ಬೆರಳಚ್ಚು ನಕಲುಗಾರ – ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

• ಜವಾನ – ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. ಲಘು ವಾಹನ ಚಾಲನಾ ಲೈಸೆನ್ಸ್ ಐಚ್ಛಿಕ (Optional)

ಉದ್ಯೋಗ ಮಾಹಿತಿ : ಕೆ.ಎಸ್.ಆರ್.ಟಿ.ಸಿ ನೌಕರರ ಕ್ರೆಡಿಟ್ ಸಹಕಾರ ಸಂಘದಲ್ಲಿ ನೇಮಕಾತಿ 2023

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ :
• ಬೆರಳಚ್ಚು ನಕಲುಗಾರ – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
• ಜವಾನ – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು‌.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ಬೃಹತ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 01, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 01, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 03, 2023

Dharwad District Court Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment