Dharwad Zilla Panchayat Recruitment 2021 : 14 ಸಹಾಯಕರು ಹಾಗೂ ವಿವಿಧ ಹುದ್ದೆಗಳ ಭರ್ತಿ

Dharwad Zilla Panchayat Recruitment 2021 : ಧಾರವಾಡ ಜಿಲ್ಲಾ ಪಂಚಾಯತ ಪ್ರಧಾನ ಕಚೇರಿಯಲ್ಲಿ ಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dharwad Zilla Panchayat Recruitment 2021 : Details of Vacancies

ಹುದ್ದೆ :
1) ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ – 01 ಹುದ್ದೆ
ಬಿಇ/ಬಿ.ಟೆಕ್/ಎಂಬಿಎ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು

2) ಜಿಲ್ಲಾ ಐ.ಇ.ಸಿ. ಸಂಯೋಜಕರು – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು

3) ತಾಲೂಕಾ ಎಂ.ಐ.ಎಸ್. ಸಂಯೋಜಕರು – 02 ಹುದ್ದೆ
ಬಿಸಿಎ/ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದಿರಬೇಕು

4) ತಾಲೂಕಾ ಐ.ಇ.ಸಿ. ಸಂಯೋಜಕರು – 02 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು

5) ತಾಲೂಕಾ ಸಂಯೋಜಕರು – 02 ಹುದ್ದೆ
ಬಿಇ/ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್) ಪದವಿ ಪಡೆದಿರಬೇಕು

6) ಡಾಟಾ ಎಂಟ್ರಿ ಆಪರೇಟರ್ – 02 ಹುದ್ದೆ
ದ್ವಿತೀಯ ಪಿಯುಸಿಯೊಂದಿಗೆ ಒಂದು ವರ್ಷದ ಕಂಪ್ಯೂಟರ್ ಜ್ಞಾನದ ಪ್ರಮಾಣ ಪತ್ರ ಹೊಂದಿರಬೇಕು.

7) ತಾಂತ್ರಿಕ ಸಹಾಯಕರು (ಕೃಷಿ) – 01 ಹುದ್ದೆ
ಬಿ.ಎಸ್ಸಿ (ಕೃಷಿ) ಅರ್ಹತೆ ಹೊಂದಿರಬೇಕು.

8) ತಾಂತ್ರಿಕ ಸಹಾಯಕರು (ಅರಣ್ಯ) – 02 ಹುದ್ದೆ
ಬಿ.ಎಸ್ಸಿ (ಅರಣ್ಯ) ಅರ್ಹತೆ ಹೊಂದಿರಬೇಕು.

9) ತಾಲೂಕಾ ತಾಂತ್ರಿಕ ಸಹಾಯಕರು – 01 ಹುದ್ದೆ
ಬಿಇ/ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ದಿಂದ ರೂ. 38,000 ವರೆಗೂ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : SDA, 4ನೇ ದರ್ಜೆ ನೌಕರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅನುಭವ : ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಧಾರವಾಡ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 03, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 18, 2021

Dharwad Zilla Panchayat Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.