Dharwad Zilla Panchayat Recruitment 2022 : ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಛೇರಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಮತ್ತು ಅಣ್ಣಿಗೇರಿ ತಾಲೂಕು ಪಂಚಾಯತಿಗಳಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Dharwad Zilla Panchayat Recruitment 2022 : Details of Vacancies
ಹುದ್ದೆ :
1) ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ ADPC : 01 ಹುದ್ದೆ
ಬಿಇ/ಬಿ.ಟೆಕ್ ಅಥವಾ ಎಂಬಿಎ ಅಥವಾ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
2) ಜಿಲ್ಲಾ ಐ.ಇ.ಸಿ. ಸಂಯೋಜಕರು DIEC : 01 ಹುದ್ದೆ
ಸ್ನಾತಕೋತ್ತರ ಪದವಿ (Mass Communication) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
3) ತಾಲೂಕಾ ಎಂ.ಐ.ಎಸ್. ಸಂಯೋಜಕರು TIMS : 03 ಹುದ್ದೆ
ಬಿಸಿಎ/ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್)(Minimum 45% marks) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
4) ತಾಲೂಕ ಐ.ಇ.ಸಿ. ಸಂಯೋಜಕರು TIEC : 02 ಹುದ್ದೆ
ಪದವಿ (Mass Communication) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
5) ತಾಲೂಕಾ ಸಂಯೋಜಕರು TC : 02 ಹುದ್ದೆ
ಬಿಇ/ ಬಿ.ಟೆಕ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
6) ಡಾಟಾ ಎಂಟ್ರಿ ಆಪರೇಟರ್ DEO : 02 ಹುದ್ದೆ
ದ್ವಿತೀಯ ಪಿಯುಸಿ ಜೊತೆಗೆ 01 ವರ್ಷದ ಕಂಪ್ಯೂಟರ್ ಜ್ಞಾನ ಪ್ರಮಾಣ ಪತ್ರ ಹೊಂದಿರಬೇಕು
7) ತಾಂತ್ರಿಕ ಸಹಾಯಕರು (ಕೃಷಿ) : 01 ಹುದ್ದೆ
ಬಿ.ಎಸ್ಸಿ (Agriculture) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
8) ತಾಂತ್ರಿಕ ಸಹಾಯಕರು (ಅರಣ್ಯ) : 02 ಹುದ್ದೆ
ಬಿ.ಎಸ್ಸಿ (Forestry) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
9) ತಾಲೂಕಾ ತಾಂತ್ರಿಕ ಸಹಾಯಕರು TA (ಸಿವಿಲ್) : 01 ಹುದ್ದೆ
ಬಿಇ/ ಬಿ.ಟೆಕ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,000 ರಿಂದ ರೂ. 38,000 ವರೆಗೂ ಸಂಭಾವನೆ ನೀಡಲಾಗುವುದು.
ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲು ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ಮಾನದಂಡಗಳಲ್ಲಿ ಮೆರಿಟ್ ಪಟ್ಟಿ ತಯಾರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ.
ಅನುಭವ : ಆಯಾ ಹುದ್ದೆಗಳಿಗೆ ಕನಿಷ್ಠ 3 ರಿಂದ 5 ವರ್ಷ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022
ಧಾರವಾಡ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು. (ಆನ್‌ಲೈನ್ ಅರ್ಜಿಗಳನ್ನು ಬೆಳಿಗ್ಗೆ 10-30 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಸಲ್ಲಿಸಬಹುದು) (ಸರ್ಕಾರಿ ರಜೆಯ ದಿನ ಆನ್‌ಲೈನ್ ಅರ್ಜಿಗಳು ಸ್ವೀಕೃತಿಯಾಗುವುದಿಲ್ಲ)
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 24, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 10, 2022
Dharwad Zilla Panchayat Recruitment 2022 : Important Links
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.