Dharwad Zilla Panchayat Recruitment 2022 : ಧಾರವಾಡ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Dharwad Zilla Panchayat Recruitment 2022 : Details of Vacancies
ಹುದ್ದೆ : ಆಡಳಿತ ಸಹಾಯಕರು (Administrative Assistant)
ಕರ್ತವ್ಯ ಸ್ಥಳ : ಅಣ್ಣಿಗೇರಿ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಮತ್ತು ನವಲಗುಂದ ತಾಲ್ಲೂಕು ಪಂಚಾಯ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯು ತಾಲೂಕು ಮಟ್ಟದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ಮಾಸಿಕ ಸಂಭಾವನೆಯನ್ನು ಪಾವತಿಸುವುದು.
ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವುದನ್ನು ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಆಯ್ಕೆ ಮಾಡಲಾಗುವುದು.
ಧಾರವಾಡ ಜಿಲ್ಲೆಯ ತಾಲ್ಲೂಕು ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಧಾರವಾಡ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 17, 2022
Dharwad Zilla Panchayat Recruitment 2022 : Important Links
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾ ಪಂಚಾಯತ್ ದೂರವಾಣಿ ಸಂಖ್ಯೆ 0836-2447542 ಸಂಪರ್ಕಿಸಬಹುದು
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.