ಧಾರವಾಡ ಜಿಲ್ಲಾ ಪಂಚಾಯತ್ ನೇಮಕಾತಿ 2023 – Dharwad Zilla Panchayat Recruitment 2023

Dharwad Zilla Panchayat Recruitment 2023 : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dharwad Zilla Panchayat Recruitment 2023 : Details of Vacancies

ಹುದ್ದೆ : ತಾಲೂಕಾ ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ತಾಲೂಕಾ ತಾಂತ್ರಿಕ ಸಹಾಯಕರು (ಸಿವಿಲ್)2
ತಾಂತ್ರಿಕ ಸಹಾಯಕರು (ತೋಟಗಾರಿಕೆ)6
ತಾಂತ್ರಿಕ ಸಹಾಯಕರು (ಅರಣ್ಯ)3
ತಾಂತ್ರಿಕ ಸಹಾಯಕರು (ರೇಷ್ಮೆ)1

ಶೈಕ್ಷಣಿಕ ಅರ್ಹತೆ :
• ತಾಲೂಕಾ ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ ಅಥವಾ ಬಿ.ಟೆಕ್/ ಡಿಪ್ಲೊಮಾ (ಸಿವಿಲ್ ಇಂಜಿನಿಯರಿಂಗ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ ಅಥವಾ ಎಂ.ಎಸ್ಸಿ ಹೊರ್ಟಿಕಲ್ಚರ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ ಫಾರೆಸ್ಟ್ರಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ ಅಥವಾ ಎಂ.ಎಸ್ಸಿ ಸೆರಿಕಲ್ಚರ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಶೀಘ್ರದಲ್ಲೇ ಡ್ರೈವರ್, ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 (ಪ್ರಯಾಣ ಭತ್ಯೆ ಪ್ರತಿ ಕಿ.ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 20,000) ಸಂಭಾವನೆ ನೀಡಲಾಗುತ್ತದೆ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅಪೇಕ್ಷಣೀಯ : ಕನಿಷ್ಠ 3 ವರ್ಷ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ.

ಆಯ್ಕೆ ವಿಧಾನ : ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಸಂಪರ್ಕಿಸಬೇಕಾದ ವಿಳಾಸ : ಶ್ರೀ ಬಿ.ಕೆ.ಆರ್. ಸರ್ವಿಸಿಸ್ ಪ್ರೈ. ಲಿ., #925, 2ನೇ ಮಹಡಿ, 3ನೇ ಕ್ರಾಸ್, 2ನೇ ಸ್ಟೇಜ್, ರಾಜಾಜಿನಗರ, ಬೆಂಗಳೂರು – 560010, ಪೊ.ನಂ – 8971396018 (ಇಮೇಲ್ – info.bkrservices@gmail.com)

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 25, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 10, 2023

Dharwad Zilla Panchayat Recruitment 2023 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment