DHFWS Bangalore Rural Recruitment 2021 : ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Bangalore Rural Recruitment 2021 : Details of Vacancies
ಹುದ್ದೆ :
ಲ್ಯಾಬ್ ಟೆಕ್ನಿಷಿಯನ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
1) Intermediate (10+2), Diploma or certified course in Medical Laboratory Technology or equivalent
2) Certificate course in Computer Operations (Minimum Six Month)
ಅನುಭವ :
ಲ್ಯಾಬ್ ಟೆಕ್ನಿಷಿಯನ್ ಆಗಿ ಎನ್ಟಿಇಪಿಯಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು.
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ವೇತನ ನೀಡಲಾಗುತ್ತದೆ.
ಹುದ್ದೆಯ ವಿಧ :
ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಆಯ್ಕೆ ವಿಧಾನ :
ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ
DHFWS Bangalore Rural Recruitment 2021 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯ ವಿಳಾಸಕ್ಕೆ ದಿನಾಂಕ 15/02/2021 ರಂದು ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಸಂದರ್ಶನಕ್ಕೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಸರನ್ನು ನೊಂದಾಯಿಸಿಕೊಂಡ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಪರಿಗಣಿಸಲಾಗುವುದು.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಆಡಳಿತ ಭವನ,
ಕೊಠಡಿ ಸಂಖ್ಯೆ 207, 2ನೇ ಮಹಡಿ, ಬೀರಸಂದ್ರ ಗ್ರಾಮ, ವಿಶ್ವನಾಥಪುರ ಅಂಚೆ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ನೇರ ಸಂದರ್ಶನ ನಡೆಯುವ ದಿನಾಂಕದ ವಿವರ :
ಸಂದರ್ಶನ ನಡೆಯುವ ದಿನಾಂಕ : ಫೆಬ್ರುವರಿ 15, 2021,
ಬೆಳಿಗ್ಗೆ 10-30 ಗಂಟೆಯಿಂದ ಮಧ್ಯಾಹ್ನ 12-30 ಗಂಟೆಯವರೆಗೆ
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.