DHFWS Chikkamagaluru Recruitment 2022 – Apply Now for 45 Various Posts

DHFWS Chikkamagaluru Recruitment 2022 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Chikkamagaluru Recruitment 2022 : Details of Vacancies

ಹುದ್ದೆ : ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ಅರಿವಳಿಕೆ ತಜ್ಞರು, ಆಯುಷ್ ವೈದ್ಯರು, ಎಂಬಿಬಿಎಸ್/ ಬಿಎಎಂಎಸ್ ವೈದ್ಯರು, ಶುಶ್ರೂಷಕರು, ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಸಮಾಲೋಚಕರು, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್, ಮಲ್ಟಿ ಪರ್ಫಸ್ ವರ್ಕರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಪ್ರಸೂತಿ ತಜ್ಞರು31,10,000
ಮಕ್ಕಳ ತಜ್ಞರು31,10,000
ಅರಿವಳಿಕೆ ತಜ್ಞರು31,10,000
ಆಯುಷ್ ವೈದ್ಯರು125,000
ಎಂಬಿಬಿಎಸ್/ ಬಿಎಎಂಎಸ್ ವೈದ್ಯರು150,000/25,000
ಶುಶ್ರೂಷಕರು1113,225
ನೇತ್ರ ಸಹಾಯಕರು312,000
ಆಡಿಯೋಮೆಟ್ರಿಕ್ ಅಸಿಸ್ಟೆಂಟ್115,000
ಸಮಾಲೋಚಕರು214,000
ಹಿರಿಯ ಮಹಿಳಾ ಆರೋಗ್ಯ ಸಹಾಯಕಿ112,600
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ1111,500
ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು314,000
ಫಾರ್ಮಾಸಿಸ್ಟ್114,000
ಮಲ್ಟಿ ಪರ್ಫಸ್ ವರ್ಕರ್120,000

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ, ಬಿ. ಫಾರ್ಮಾ, ಡಿ. ಫಾರ್ಮಾ, ಬಿ.ಎಸ್ಸಿ ನರ್ಸಿಂಗ್, ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಡಿ.ಸಿ.ಹೆಚ್/ಡಿ.ಎನ್.ಬಿ/ಎಂಡಿ ಪದವಿ ಪಡೆದಿರಬೇಕು. (ಆಯಾ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಮಾಹಿತಿಯನ್ನು ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)

ವಯೋಮಾನ : ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ಅರಿವಳಿಕೆ ತಜ್ಞರು ಹುದ್ದೆಗೆ 70 ವರ್ಷ, ಮಲ್ಟಿ ಪರ್ಫಸ್ ವರ್ಕರ್, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ 65 ವರ್ಷ, ಆಯುಷ್ ವೈದ್ಯರು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಶುಶ್ರೂಷಕರು, ನೇತ್ರ ಸಹಾಯಕರು, ಸಮಾಲೋಚಕರು ಹುದ್ದೆಗೆ 45 ವರ್ಷ, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಕಿರಿಯ ಪ್ರ‌ಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಹುದ್ದೆಗೆ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ರೋಸ್ಟರ್ ಕಂ ಮೆರಿಟ್ ಮತ್ತು ಸೇವಾ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಉದ್ಯೋಗ ಮಾಹಿತಿ : ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದೃಢೀಕರಿಸಿದ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಯವರ ಕಛೇರಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ, ಕೆ.ಎಂ. ರೋಡ್, ಚಿಕ್ಕಮಗಳೂರು

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 03, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 12, 2022

DHFWS Chikkamagaluru Recruitment 2022 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment