
DHFWS Chitradurga Recruitment 2026 :
ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Chitradurga Recruitment 2026 : Details of Vacancies
ಹುದ್ದೆ :
ಫಾರ್ಮಸಿ ಅಧಿಕಾರಿ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
ಡಿ.ಫಾರ್ಮಸಿ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್ ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಿರಬೇಕು.
ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ಬಯೋಡಾಟಾ ಹಾಗೂ ವಿದ್ಯಾರ್ಹತೆಯ ದೃಢೀಕೃತ ದಾಖಲಾತಿಗಳನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಪಿ.ಬಿ. ರಸ್ತೆ, ಚಿತ್ರದುರ್ಗ – 577501
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 02, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 16, 2026
DHFWS Chitradurga Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.