DHFWS Haveri Recruitment 2025 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಪಿಡಮಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Haveri Recruitment 2025 : Details of Vacancies
ಹುದ್ದೆ : ಎಪಿಡಮಿಯಾಲಜಿಸ್ಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಎಂ.ಬಿ.ಬಿ.ಎಸ್ ಗ್ರಾಜ್ಯುಯೇಟ್/ ಆಯುಷ್/ ಡೆಂಟಲ್ ಸೈನ್ಸ್ ಗ್ರಾಜ್ಯುಯೇಟ್/ ಎಂ.ಎಸ್ಸಿ (ಎಪಿಡಮಿಯಾಲಜಿ/ಎಂ.ಎ.ಇ).
ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2025
ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 45 ವರ್ಷ ಮೀರಿರಬಾರದು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನ ದಿನದಂದು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ : ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಆಡಳಿತ ಭವನ, ಹಾವೇರಿ ಎ ಬ್ಲಾಕ್, 3ನೇ ಮಹಡಿ, ಕೊಠಡಿ ಸಂಖ್ಯೆ-15, ಹಾವೇರಿ.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ದಿನಾಂಕ : ಮೇ 29, 2025 ಬೆಳಿಗ್ಗೆ 10:00 ಗಂಟೆಗೆ
DHFWS Haveri Recruitment 2025 : Important Links
NOTIFICATION | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.