Dhfws Karnataka Recruitment 2021 – 75 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Dhfws Karnataka Recruitment 2021 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dhfws Karnataka Recruitment 2021 : Details of Vacancies

ಹುದ್ದೆ : ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಜನರಲ್ ಮೆಡಿಸಿನ್, ಎಂ.ಬಿ.ಬಿ.ಎಸ್, ಫಿಜಿಷಿಯನ್, ಡೆಂಟಲ್ ಟೆಕ್ನಿಷಿಯನ್, ಶುಶ್ರೂಷಕಿಯರು, ಓ.ಟಿ. ಟೆಕ್ನಿಷಿಯನ್, ಕ್ಷೇತ್ರ ಲಸಿಕಾ ಕಾರ್ಯಕರ್ತರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್, ಮೈಕ್ರೋ ಬಯೋಲಾಜಿಸ್ಟ್, ಜಿಲ್ಲಾ ಆಶಾ ಮೇಲ್ವಿಚಾರಕರು, ತಾಲೂಕಾ ಆಶಾ ಮೇಲ್ವಿಚಾರಕರು, ಡಿ.ಇ.ಐ.ಸಿ. ಮ್ಯಾನೇಜರ್ ಹಾಗೂ ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 75ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :
ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಜನರಲ್ ಮೆಡಿಸಿನ್ ಹುದ್ದೆಗೆ ಸಂಬಂಧಿಸಿದ ತಜ್ಞತೆ ವಿಷಯದಲ್ಲಿ ಎಂ.ಡಿ/ ಎಂ.ಎಸ್/ ಡಿಪ್ಲೋಮಾ ಪದವಿ ಪಡೆದಿರಬೇಕು.
ಫಿಜಿಷಿಯನ್ ಹುದ್ದೆಗೆ ಎಂ.ಬಿ.ಬಿ.ಎಸ್, ಎಂ.ಡಿ, ಅಥವಾ ಸಮಾನಾಂತರ ಪದವಿಯನ್ನು ಮೆಡಿಕಲ್ ಕೌನ್ಸಿಲ್ ನಿಂದ ಮಾನ್ಯತೆ ಹೊಂದಿದ ಸಂಸ್ಥೆಯಿಂದ ಹೊಂದಿರಬೇಕು.
ಡೆಂಟಲ್ ಟೆಕ್ನಿಷಿಯನ್ ಹುದ್ದೆಗೆ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ಹಾಗೂ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ ಇನ್ ಡೆಂಟಲ್ ಟೆಕ್ನಿಷಿಯನ್ ಹಾಗೂ ರಾಜ್ಯ ದಂತ ಕೌನ್ಸಿಲ್ ನಿಂದ ರಿಜಿಸ್ಟ್ರೇಷನ್ ಹೊಂದಿರಬೇಕು.
ಶೂಶ್ರೂಷಕಿಯರು ಹುದ್ದೆಗೆ ಎಂ.ಎಸ್ಸಿ/ಬಿ.ಎಸ್ಸಿ/ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆ ಯೊಂದಿಗೆ ಪಬ್ಲಿಕ್ ಹೆಲ್ತ್ / ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ಓ.ಟಿ. ಟೆಕ್ನಿಷಿಯನ್ ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮ ಇನ್ ಓ.ಟಿ ಟೆಕ್ನಿಷಿಯನ್ ಅರ್ಹತೆ ಹೊಂದಿರಬೇಕು.
ಕ್ಷೇತ್ರ ಲಸಿಕಾ ಕಾರ್ಯಕರ್ತರು ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಎಮ್.ಎಸ್.ಡಬ್ಲ್ಯೂ ಪದವಿ ಅಥವಾ ತತ್ಸಮಾನ ಪದವಿಯೊಂದಿಗೆ 2 ವರ್ಷಗಳ ಸರಕಾರಿ ಅಥವಾ ಅರೇಸರಕಾರಿ ಎನ್.ಜಿ.ಓ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಆಶಾ ಮೇಲ್ವಿಚಾರಕರು ಹುದ್ದೆಗೆ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್/ ಡಿಪ್ಲೋಮಾ ಇನ್ ನರ್ಸಿಂಗ್ ಆಯುಷ್ ಕೋರ್ಸಗಳಲ್ಲಿ ತೇರ್ಗಡೆಯಾಗಿರಬೇಕು.
ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು ಹುದ್ದೆಗೆ ಎಂ.ಬಿ.ಎ ಪದವಿ ಪಡೆದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ವಿದ್ಯಾರ್ಹತೆ ಹಾಗೂ ಅನುಭವದ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಉತ್ತರ ಕನ್ನಡ, ಕಾರವಾರ

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 24, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 03, 2021

Dhfws Karnataka Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 08382-226339

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.