Dhfws Karnataka Recruitment 2022 – Apply Online for 320 Microbiologist, Junior Health Assistant and Various Posts

Dhfws Karnataka Recruitment 2022 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಅರೆ-ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dhfws Karnataka Recruitment 2022 : Details of Vacancies

ಹುದ್ದೆ : ಸೈಕಾಲಜಿಸ್ಟ್, ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್, ಮೈಕ್ರೋಬಯಾಲಜಿಸ್ಟ್, ಸಹಾಯಕ ಕೀಟಶಾಸ್ತ್ರಜ್ಞ, ಫಿಜಿಯೋಥೆರಪಿಸ್ಟ್, ಡೆಂಟಲ್ ಮೆಕಾನಿಕ್, ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ/ ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, ನೇತ್ರಾಧಿಕಾರಿ/ ನೇತ್ರ ಸಹಾಯಕರು, ಫಾರ್ಮಾಸಿ ಅಧಿಕಾರಿ/ ಫಾರ್ಮಾಸಿಸ್ಟ್, ಇಸಿಜಿ ತಂತ್ರಜ್ಞ, ಡಯಾಲಿಸಿಸ್ ತಂತ್ರಜ್ಞ, ಕಿರಿಯ ಆರೋಗ್ಯ ಸಹಾಯಕರು (ಮಹಿಳೆ)/ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ವಿದ್ಯುತ್ ತಂತ್ರಜ್ಞ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 320 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸೈಕಾಲಜಿಸ್ಟ್343100-83900
ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್143100-83900
ಮೈಕ್ರೋಬಯಾಲಜಿಸ್ಟ್643100-83900
ಸಹಾಯಕ ಕೀಟಶಾಸ್ತ್ರಜ್ಞ140900-78200
ಫಿಜಿಯೋಥೆರಪಿಸ್ಟ್533450-62600
ಡೆಂಟಲ್ ಮೆಕಾನಿಕ್330350-58250
ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ/ ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು5427650-52650
ನೇತ್ರಾಧಿಕಾರಿ/ ನೇತ್ರ ಸಹಾಯಕರು1527650-52650
ಫಾರ್ಮಾಸಿ ಅಧಿಕಾರಿ/ ಫಾರ್ಮಾಸಿಸ್ಟ್9827650-52650
ಇಸಿಜಿ ತಂತ್ರಜ್ಞ527650-52650
ಡಯಾಲಿಸಿಸ್ ತಂತ್ರಜ್ಞ227650-52650
ಕಿರಿಯ ಆರೋಗ್ಯ ಸಹಾಯಕರು (ಮಹಿಳೆ)/ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ12623500-47650
ವಿದ್ಯುತ್ ತಂತ್ರಜ್ಞ123500-47650

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಎಂ.ಎ, ಬಿ.ಎಸ್ಸಿ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು, ಸೇವಾ ಕೃಪಾಂಕ ಮತ್ತು ಕಾಲಕಾಲಕ್ಕೆ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡವನ್ನು ಅಧ್ಯಯನ ಮಾಡದೆ ಇದ್ದಲ್ಲಿ ನೇಮಕಾತಿ ಪೂರ್ವದಲ್ಲಿಯೇ ಅಭ್ಯರ್ಥಿಗಳು ಇಲಾಖೆ ವತಿಯಿಂದ ನಡೆಸುವ ಕನ್ನಡ ಭಾಷಾ ಜ್ಞಾನದ ಪರೀಕ್ಷೆಯಲ್ಲಿ ಒಂದೇ ಅವಕಾಶದಲ್ಲಿ ಉತ್ತೀರ್ಣರಾಗಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ :
• ಸಾಮಾನ್ಯ ಅರ್ಹತಾ ಅಭ್ಯರ್ಥಿಗಳು ರೂ. 700
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 400
• ಮಾಜಿ ಸೈನಿಕ ಅಭ್ಯರ್ಥಿಗಳು ರೂ. 200
• ಎಸ್‌ಸಿ / ಎಸ್‌ಟಿ / ಪ್ರವರ್ಗ 1, ವಿಕಲಚೇತನ ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 28, 2022
ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 29, 2022

Dhfws Karnataka Recruitment 2022 : Important Links

NotificationClick Here
Apply Online Click Here ಆಗಸ್ಟ್ 29 ರಿಂದ ಪ್ರಾರಂಭ

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment