DHFWS Kolar Recruitment 2024 : ರಾಷ್ಟ್ರೀಯ ಕ್ಷಯರೋಗ ನಿವಾರಣಾ ಕಾರ್ಯಕ್ರಮದಡಿಯಲ್ಲಿ ಬಂಗಾರಪೇಟೆ ಮತ್ತು ಕೆಜೆಎಫ್ ಚಿಕಿತ್ಸಾ ಘಟಕಕ್ಕೆ ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Kolar Recruitment 2024 : Details of Vacancies
ಹುದ್ದೆ : ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಪಿಯುಸಿ ಉತ್ತೀರ್ಣರಾಗಿರಬೇಕು. ಪದವೀಧರ/ ಡಿಪ್ಲೊಮಾ ಪ್ರಯೋಗಶಾಲಾ ತಂತ್ರಜ್ಞರ (ಮೆಡಿಕಲ್) ಕೋರ್ಸ್ ಮಾಡಿರಬೇಕು. ಪ್ಯಾರಾ ಮೆಡಿಕಲ್ ಬೋರ್ಡನಲ್ಲಿ ನೋಂದಣಿಯಾಗಿರಬೇಕು. ದ್ವಿಚಕ್ರ ವಾಹನ ಚಲಾಯಿಸಲು ಖಾಯಂ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಗಣಕಯಂತ್ರದಲ್ಲಿ ಕಾರ್ಯನಿರ್ವಹಿಸುವ 2 ತಿಂಗಳ ತರಬೇತಿಯ ಪ್ರಮಾಣಪತ್ರ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತ್ ನೇಮಕಾತಿ 2024
ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000 ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ನಮೂನೆ ದೊರೆಯುವ ಸ್ಥಳ : ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ, ಕೆ.ಎನ್.ಸ್ಯಾನಿಟೋರಿಯಂ ಕಟ್ಟಡ, ಬಂಗಾರಪೇಟೆ ರಸ್ತೆ, ಕೋಲಾರ – 563102
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 02, 2024
DHFWS Kolar Recruitment 2024 : Important Links
NOTIFICATION | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.