
DHFWS Raichur Recruitment 2026 : ರಾಯಚೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Raichur Recruitment 2026 : Details of Vacancies
ಹುದ್ದೆ :
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆರೋಗ್ಯ ನಿರೀಕ್ಷಣಾಧಿಕಾರಿಗಳು.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 20 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು | 19 |
| ಆರೋಗ್ಯ ನಿರೀಕ್ಷಣಾಧಿಕಾರಿಗಳು | 1 |
ಶೈಕ್ಷಣಿಕ ಅರ್ಹತೆ :
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು –
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ತರಬೇತಿಯನ್ನು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಮತ್ತು ಕರ್ನಾಟಕ ನರ್ಸಿಂಗ್ ಕೌನ್ಸಿಲನಲ್ಲಿ ನೊಂದಣಿಯಾಗಿರಬೇಕು.
ಆರೋಗ್ಯ ನಿರೀಕ್ಷಣಾಧಿಕಾರಿಗಳು –
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಹೊಂದಿರಬೇಕು. ಅಥವಾ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2026
ವಯೋಮಿತಿ :
ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ :
| ಹುದ್ದೆ | ವೇತನ |
| ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು | ರೂ. 15,397/- |
| ಆರೋಗ್ಯ ನಿರೀಕ್ಷಣಾಧಿಕಾರಿಗಳು | ರೂ. 15,397/- |
ಆಯ್ಕೆ ವಿಧಾನ :
ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 25, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 11, 2026
DHFWS Raichur Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.