ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2024 – DHFWS Tumkur Recruitment 2024

DHFWS Tumkur Recruitment 2024 : ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Tumkur Recruitment 2024 : Details of Vacancies

ಹುದ್ದೆ : ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞರು, ಕಿರಿಯ ಆರೋಗ್ಯ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 60 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು12
ಶುಶ್ರೂಷಾಧಿಕಾರಿಗಳು12
ಪ್ರಯೋಗಶಾಲಾ ತಂತ್ರಜ್ಞರು11
ಕಿರಿಯ ಆರೋಗ್ಯ ಸಹಾಯಕರು25

ಶೈಕ್ಷಣಿಕ ಅರ್ಹತೆ :
• ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು – ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನಶಿಪ್ ಪೂರೈಸಿರಬೇಕು ಹಾಗೂ ಕೆ.ಎಂ.ಸಿ.ಯ ನೋಂದಣಿಯನ್ನು ಹೊಂದಿರತಕ್ಕದ್ದು.

• ಶುಶ್ರೂಷಾಧಿಕಾರಿಗಳು – ಬಿ.ಎಸ್.ಸಿ ನರ್ಸಿಂಗ್ ಅಥವಾ ಪೋಸ್ಟ್ ಸರ್ಟಿಫೈಡ್ ಬಿ.ಎಸ್.ಸಿ ನರ್ಸಿಂಗ್ ಅಥವಾ ಡಿಪ್ಲೋಮಾ ಇನ್ ನರ್ಸಿಂಗ್ ಕೋರ್ಸ್ ಉತ್ತೀರ್ಣ ಹೊಂದಿರಬೇಕು.

• ಪ್ರಯೋಗಶಾಲಾ ತಂತ್ರಜ್ಞರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಡಿಪ್ಲೋಮಾ ಕೋರ್ಸ್ ನಲ್ಲಿ ಉತ್ತೀರ್ಣ ಹೊಂದಿರಬೇಕು.

• ಕಿರಿಯ ಆರೋಗ್ಯ ಸಹಾಯಕರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.

ಉದ್ಯೋಗ ಮಾಹಿತಿ : ಕೊಡಗು ಡಿಸಿಸಿ ಬ್ಯಾಂಕ್ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ನಿಗದಿಪಡಿಸಲಾಗಿದೆ. (ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು ಹುದ್ದೆ ಹೊರತುಪಡಿಸಿ)
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು – ಗರಿಷ್ಠ 70 ವರ್ಷ

ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳು ಹಾಗೂ ಅವುಗಳ ನಕಲು ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ, ಅಮಾನಿಕೆರೆ ಮುಂಭಾಗ, ತುಮಕೂರು ಜಿಲ್ಲೆ.

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಡಿಸೆಂಬರ್ 26, 2024

DHFWS Tumkur Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment