ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ), ಕ್ಷಯ ವಿಭಾಗ, ಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಹುದ್ದೆಯ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಹುದ್ದೆಗಳ ಸಂಖ್ಯೆ, ವಯೋಮಾನ, ಮಾಸಿಕ ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
Tuberculosis Health Visitor (TBHV)
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಅಗತ್ಯವಿರುವ 01 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಕರ್ತವ್ಯ ಸ್ಥಳ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು
ಹುದ್ದೆಯ ವಿಧ :
ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• Graduate in Science or Intermediate (10+2) and experience of working as MPW/LHV/ANM/Healthworker / Certificate or higher course in Health Education / Counseling
• Certificate course in Computer operator (minimum six months)
ವಯೋಮಾನ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ನಿಗದಿಪಡಿಸಲಾದ ಮಾಸಿಕ ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,850/- ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : ಬೆಳಗಾವಿ ಹಾಗೂ ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ
ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಗಳು ಉಡುಪಿ ಜಿಲ್ಲಾ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ, ದೃಢೀಕೃತ ಅಂಕಪಟ್ಟಿ ಹಾಗೂ ಇತರ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಛೇರಿ, ಜಿಲ್ಲಾಸ್ಪತ್ರೆಯ ಆವರಣ, ಅಜ್ಜರಕಾಡು – ಉಡುಪಿ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.
ನಿಗದಿತ ಅರ್ಜಿ ಶುಲ್ಕದ ವಿವರ :
ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ಇತರೆ ಮಾಹಿತಿ :
ಸ್ಥಳೀಯ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 16, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 29, 2020 ಅಪರಾಹ್ನ ಘಂಟೆ 4-30ರ ಒಳಗೆ
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.