
DHFWS Udupi Recruitment 2026 : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Udupi Recruitment 2026 : Details of Vacancies
ಹುದ್ದೆ :
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ | 5 |
| ಫಾರ್ಮಸಿ ಅಧಿಕಾರಿ | 13 |
ಶೈಕ್ಷಣಿಕ ಅರ್ಹತೆ :
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ –
ಡಿಪ್ಲೊಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಪಡೆದಿರಬೇಕು.
ಫಾರ್ಮಸಿ ಅಧಿಕಾರಿ –
ಡಿ ಫಾರ್ಮಾ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಡಿ ಫಾರ್ಮಾ ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲ್ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಸಲ್ಲಿಸಬೇಕಾದ ದಾಖಲೆಗಳು :
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗೆ –
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಡಿಪ್ಲೋಮಾ ಇನ್ ಲ್ಯಾಬೋರೇಟರಿ (DMLT) ಅಂಕಪಟ್ಟಿಗಳು
- ಪ್ಯಾರಾಮೆಡಿಕಲ್ ಬೋರ್ಡ್ ನೋಂದಣಿ ಪ್ರಮಾಣ ಪತ್ರ
- ಇತ್ತೀಚಿನ ಜಾತಿ ಪ್ರಮಾಣ ಪತ್ರ, ಕನ್ನಡ ಭಾಷಾ ಪ್ರಮಾಣ ಪತ್ರ
- ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ
- ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು
ಫಾರ್ಮಸಿ ಅಧಿಕಾರಿ ಹುದ್ದೆಗೆ –
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಡಿ ಫಾರ್ಮಾ ಅಂಕಪಟ್ಟಿಗಳು
- ಕರ್ನಾಟಕ ಫಾರ್ಮಸಿ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ
- ಇತ್ತೀಚಿನ ಜಾತಿ ಪ್ರಮಾಣ ಪತ್ರ
- ಕನ್ನಡ ಭಾಷಾ ಪ್ರಮಾಣ ಪತ್ರ
- ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ
- ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಉಡುಪಿ ಜಿಲ್ಲೆ
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 13, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 21, 2026
DHFWS Udupi Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.