DHFWS Vijayapura Recruitment 2023 : ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Vijayapura Recruitment 2023 : Details of Vacancies
ಹುದ್ದೆ : ಆಯುಷ್ & ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು, ಸೈಕಾಲಾಜಿಸ್ಟ್/ ಆಪ್ತ ಸಮಾಲೋಚಕರು, ಫಿಜಿಯೋಥೆರಪಿಸ್ಟ್, ಸೈಕಾಲಾಜಿಸ್ಟ್ (ಆರ್.ಬಿ.ಎಸ್.ಕೆ/ ಡಿ.ಇ.ಐ.ಸಿ), ಆಡಿಯೋಲಾಜಿಸ್ಟ್, ಮಲೇರಿಯಾ/ ವಿ.ಬಿ.ಡಿ ಸುಪರ್ವೈಸರ್, ಆಪ್ತ ಸಮಾಲೋಚಕರು, ಡೆಂಟಲ್ ಹೈಜನಿಸ್ಟ್, ಆಡಿಯೊಮೆಟ್ರಿಕ್ ಅಸಿಸ್ಟಂಟ್, ಶುಶ್ರೂಷಣಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿ, ತಾಲೂಕಾ ಆಶಾ ಮೇಲ್ವಿಚಾರಕಿ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 40 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
• ಆಯುಷ್ & ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು – ಆಯುಷ್ ವೈದ್ಯಾಧಿಕಾರಿಗಳಿಗೆ ಆಯುಷ್ ವೈದ್ಯ ಪದ್ಧತಿಯಲ್ಲಿ ಹಾಗೂ ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳಿಗೆ ಬಿ.ಎ.ಎಮ್.ಎಸ್ ಪದವಿ ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
• ಡೆಂಟಲ್ ಟೆಕ್ನಿಷಿಯನ್ – ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ಹಾಗೂ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ ಇನ್ ಡೆಂಟಲ್ ಟೆಕ್ನಿಷಿಯನ್ ಹಾಗೂ ರಾಜ್ಯ ದಂತ ಕೌನ್ಸಿಲ್ ನಿಂದ ರಿಜಿಸ್ಟ್ರೇಷನ್ ಹೊಂದಿರಬೇಕು.
• ಸೈಕಾಲಾಜಿಸ್ಟ್/ ಆಪ್ತ ಸಮಾಲೋಚಕರು (ಎನ್.ಟಿ.ಸಿ.ಪಿ) – ಎಮ್.ಎಸ್.ಡಬ್ಲ್ಯೂ ಪದವಿ ಹೊಂದಿರಬೇಕು/ ಸೈಕಾಲಜಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಫಿಜಿಯೋಥೆರಪಿಸ್ಟ್ – ಫಿಜಿಯೋಥೆರಪಿ ಪದವಿ ಹೊಂದಿರಬೇಕು ಹಾಗೂ ಫಿಜಿಯೋಥೆರಪಿ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದಿರಬೇಕು.
• ಸೈಕಾಲಜಿಸ್ಟ್ (ಆರ್.ಬಿ.ಎಸ್.ಕೆ/ ಡಿ.ಇ.ಐ.ಸಿ) – ಮಕ್ಕಳ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್ – ಬ್ಯಾಚುಲರ್ಸ ಡಿಗ್ರಿ ಇನ್ ಸ್ಪೀಚ್ & ಲ್ಯಾಂಗ್ವೇಜ್ ಪ್ಯಾಥಾಲಜಿ.
• ಮಲೇರಿಯಾ/ ವಿ.ಬಿ.ಡಿ ಸುಪರ್ವೈಸರ್ – ಬಯಾಲಜಿ ಪದವಿ ಹೊಂದಿರಬೇಕು.
• ಆಪ್ತ ಸಮಾಲೋಚಕರು, ರಕ್ತ ಶೇಖರಣಾ ಘಟಕ – ಎಮ್.ಎಸ್.ಡಬ್ಲ್ಯೂ ಪದವಿ ಅಥವಾ ಎಮ್.ಎ ಇನ್ ಸೈಕಾಲಜಿ ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರಬೇಕು.
• ಡೆಂಟಲ್ ಹೈಜನಿಸ್ಟ್ – 10+2 ವಿಜ್ಞಾನ ಮತ್ತು ಡಿಪ್ಲೊಮಾ ಇನ್ ಡೆಂಟಲ್ ಹೈಜನಿಸ್ಟ್ ಕೋರ್ಸ್ ಹೊಂದಿರಬೇಕು ಮತ್ತು ಸ್ಟೇಟ್ ಡೆಂಟಲ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು.
• ಶೂಶ್ರೂಷಕಿಯರು – ಬಿ.ಎಸ್ಸಿ ನರ್ಸಿಂಗ್ ಪದವಿ ಅಥವಾ ಡಿಪ್ಲೋಮಾ ನರ್ಸಿಂಗ್ ಕೋರ್ಸ್ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು.
• ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ – ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಯನ್ನು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಎ.ಎನ್.ಎಂ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಮತ್ತು ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು.
• ಆರೋಗ್ಯ ನಿರೀಕ್ಷಣಾಧಿಕಾರಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತ ತರಬೇತಿ ಪಡೆದಿರಬೇಕು.
• ತಾಲೂಕಾ ಆಶಾ ಮೇಲ್ವಿಚಾರಕಿ – ಜಿ.ಎನ್.ಎಂ/ಎ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಪದವಿ ಹೊಂದಿರಬೇಕು ಮತ್ತು ಗಣಕಯಂತ್ರ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : SSC MTS ನೇಮಕಾತಿ 2023 – 11406 ಹುದ್ದೆ
ವಯೋಮಿತಿ : ದಿನಾಂಕ 19/01/2023ಕ್ಕೆ ಅಭ್ಯರ್ಥಿಗಳ ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,303 ರಿಂದ 25,000 ವರೆಗೂ ವೇತನ ನೀಡಲಾಗುತ್ತದೆ.
ಅನುಭವ : ಅಭ್ಯರ್ಥಿಗಳು ಆಯಾ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ ಸೇವಾ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ಹಾಗೂ ಝೇರಾಕ್ಸ್ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ನೋಂದಾಯಿಸಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ
ಕಾರ್ಯಾಲಯ, ಹಳೇ ಆಸ್ಪತ್ರೆ ಆವರಣ, ಶಿವಾಜಿ ವೃತ್ತ, ಅಥಣಿ ರೋಡ, ವಿಜಯಪುರ
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 19, 2023
ಕಛೇರಿಯಿಂದ ಅರ್ಜಿ ನಮೂನೆ ಪಡೆಯಲು ಕೊನೆಯ ದಿನಾಂಕ : ಜನವರಿ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2023
DHFWS Vijayapura Recruitment 2023 : Important Links
NOTIFICATION | CLICK HERE |
Telegram Join Link | Click Here |
ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.