DHFWS Vijayapura Recruitment 2024 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Vijayapura Recruitment 2024 : Details of Vacancies
ಹುದ್ದೆ : ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು, ನೇತ್ರ ಸಹಾಯಕರು, ಶುಶ್ರೂಷಣಾಧಿಕಾರಿ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು | 16 |
ನೇತ್ರ ಸಹಾಯಕರು | 08 |
ಶುಶ್ರೂಷಣಾಧಿಕಾರಿ | 08 |
ಶೈಕ್ಷಣಿಕ ಅರ್ಹತೆ :
• ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು – ಬಿ.ಎ.ಎಮ್.ಎಸ್ ಪದವಿ ಹೊಂದಿರಬೇಕು. ಅಂಗೀಕೃತ ನೋಂದಣಿ ಪ್ರಾಧಿಕಾರದಿಂದ ವೃತ್ತಿ ನೋಂದಣಿಯನ್ನು ಮಾಡಿಕೊಂಡಿರಬೇಕು.
• ನೇತ್ರ ಸಹಾಯಕರು – ಎರಡು ವರ್ಷದ ಡಿಪ್ಲೊಮಾ ಇನ್ ಆಪ್ಟೋಮೆಟ್ರಿ ಅಥವಾ ನೇತ್ರ ಸಹಾಯಕರು ಆಗಿ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ NPCB ನಿಯಮಾನುಸಾರ ತರಬೇತಿ ಪಡೆದಿರಬೇಕು.
• ಶುಶ್ರೂಷಣಾಧಿಕಾರಿ – ಬಿ.ಎಸ್ಸಿ ನರ್ಸಿಂಗ್ ಪದವಿ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸ್ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲನಲ್ಲಿ ನೊಂದಣಿಯಾಗಿರಬೇಕು.
ಉದ್ಯೋಗ ಮಾಹಿತಿ : ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2024
ವಯೋಮಾನ : ದಿನಾಂಕ 05/12/2024ರಂತೆ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಾನ ಮೀರಿರಬಾರದು.
ವೇತನ :
ಹುದ್ದೆ | ವೇತನ |
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು | 46894 |
ನೇತ್ರ ಸಹಾಯಕರು | 15554 |
ಶುಶ್ರೂಷಣಾಧಿಕಾರಿ | 15554 |
ಆಯ್ಕೆ ವಿಧಾನ : ರೋಷ್ಟರ್ ಕಂ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನಿಗದಿಪಡಿಸಿದ ದಿನಾಂಕದಂದು ಹಾಜರಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಭವನ ವಿಜಯಪುರ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ : ಡಿಸೆಂಬರ್ 05, 2024 ರಿಂದ ಡಿಸೆಂಬರ್ 06, 2024
ನೇತ್ರ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ : ಡಿಸೆಂಬರ್ 07, 2024
ಶುಶ್ರೂಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ : ಡಿಸೆಂಬರ್ 09, 2024 ಡಿಸೆಂಬರ್ 10, 2024
DHFWS Vijayapura Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.