District Child Labor Planning Society Recruitment 2022 : Apply for 1 Assistant Accountant cum Office Assistant Post

District Child Labor Planning Society Recruitment 2022 : ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಯಾದಗಿರಿ ಜಿಲ್ಲೆ ಈ ಕಛೇರಿಗೆ ಲೆಕ್ಕಿಗರು ಕಂ ಕಛೇರಿ ಸಹಾಯಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Child Labor Planning Society Recruitment 2022 : Details of Vacancies

ಹುದ್ದೆ : ಲೆಕ್ಕಿಗರು-ಕಂ-ಕಛೇರಿ ಸಹಾಯಕರು

ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಕಛೇರಿಯಲ್ಲಿ ಅಗತ್ಯವಿರುವ 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಕಂಪ್ಯೂಟರ್ ಜ್ಞಾನ Tally (M.S.Office, M.S.Excel & Internet Operation, Kannada & English typing ಕಡ್ಡಾಯ)
• ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
• ಲೆಕ್ಕ ಪತ್ರ ನಿರ್ವಹಣೆ ಮತ್ತು ಬ್ಯಾಂಕ್ ವ್ಯವಹಾರದಲ್ಲಿ ಲೆಕ್ಕ ಪತ್ರಗಳಿಗೆ ಸಂಬಂಧಿಸಿದ ದಾಖಲೆ ರಿಜಿಸ್ಟರಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು.
• ಕನ್ನಡ/ಇಂಗ್ಲಿಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಶೈಲಿಯನ್ನು ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 14,641 ಮಾಸಿಕ ಗೌರವಧನ ನೀಡಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿ

ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಲೆಕ್ಕಿಗರು ಕಂ ಕಛೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ ಎ-7, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ ಜಿಲ್ಲೆ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 11, 2022

District Child Labor Planning Society Recruitment 2022 : Important Links

ಅಧಿಸೂಚನೆ & ಅರ್ಜಿ ನಮೂನೆ

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 08473-252345 ಸಂಪರ್ಕಿಸಬಹುದು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment