District Child Protection Unit Recruitment 2021 : ಸರ್ಕಾರಿ ಬಾಲಕರ ಬಾಲ ಮಂದಿರ ಸಂಸ್ಥೆ ಯಾದಗಿರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
District Child Protection Unit Recruitment 2021 : Details of Vacancies
ಹುದ್ದೆ :
• ರಕ್ಷಕರು : 02 ಹುದ್ದೆ
ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣ ಜೊತೆಗೆ ರಕ್ಷಕರ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವೇತನ : ರೂ. 7,500
ವಯಸ್ಸು : 21 ರಿಂದ 38 ವರ್ಷ
• ಅಡುಗೆ ಸಹಾಯಕರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : 7ನೇ ತರಗತಿ ಪಾಸಾಗಿರಬೇಕು ಜೊತೆಗೆ ಅಡುಗೆ ಕೆಲಸದಲ್ಲಿ ನುರಿತವರಾಗಿರಬೇಕು.
ವೇತನ : ರೂ. 7,500
ವಯಸ್ಸು : 22 ರಿಂದ 38 ವರ್ಷ
• ಸೇವಕರು/ ಸ್ವೀಪರ್ : 01 ಹುದ್ದೆ
ಶೈಕ್ಷಣಿಕ ಅರ್ಹತೆ : 7ನೇ ತರಗತಿ ಪಾಸಾಗಿರಬೇಕು ಜೊತೆಗೆ ಕೆಲಸದ ಅನುಭವ ಹೊಂದಿರಬೇಕು.
ವೇತನ : ರೂ. 6,000
ವಯಸ್ಸು : 18 ರಿಂದ 38 ವರ್ಷ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ
ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಇಲಾಖೆಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಕೋಣೆ ಸಂಖ್ಯೆ : ಸಿ-17 ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಯಾದಗಿರಿ
ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 100 ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ತಗೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 08, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2021
District Child Protection Unit Recruitment 2021 : Important Links
ಅಧಿಸೂಚನೆ & ಅರ್ಜಿ ನಮೂನೆ : Click Here
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.