DKMUL Recruitment 2021 : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DKMUL Recruitment 2021 : Details of Vacancies
ಹುದ್ದೆ :
1) ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) – 07 ಹುದ್ದೆ
ಪಶು ವೈದ್ಯಕೀಯ ವಿಜ್ಞಾನದಲ್ಲಿ ಬಿ.ವಿ.ಎಸ್ಸಿ/ ಬಿ.ವಿ.ಎಸ್ಸಿ & ಎ.ಹೆಚ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
2) ತಾಂತ್ರಿಕ ಅಧಿಕಾರಿ (ಡಿ.ಟಿ) – 04 ಹುದ್ದೆ
ಬಿ.ಎಸ್ಸಿ (ಡಿ.ಟಿ)/ ಬಿ.ಟೆಕ್ (ಡಿ.ಟೆಕ್) ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
3) ತಾಂತ್ರಿಕ ಅಧಿಕಾರಿ (ಪರಿಸರ) – 01 ಹುದ್ದೆ
ಬಿಇ ಎನ್ವಿರಾನ್ಮೆಂಟಲ್ / ಬಿಇ ಕೆಮಿಕಲ್/ ಎಂಎಸ್ಸಿ ಎನ್ವಿರಾನ್ಮೆಂಟಲ್ ಸೈನ್ಸ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
4) ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್) – 01 ಹುದ್ದೆ
ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿಇ ಅಥವಾ ಬಿಟೆಕ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
5) ವಿಸ್ತರಣಾಧಿಕಾರಿ ದರ್ಜೆ 3 – 08 ಹುದ್ದೆ
ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು
6) ಡೈರಿ ಸೂಪರ್ವೈಸರ್ ದರ್ಜೆ 2 – 05 ಹುದ್ದೆ
ಇಲೆಕ್ಟ್ರಿಕಲ್ / ಮೆಕ್ಯಾನಿಕಲ್ / ಸಿವಿಲ್ / ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಷಯಗಳಲ್ಲಿ ಡಿಪ್ಲೊಮಾದಲ್ಲಿ ತೇರ್ಗಡೆ ಹೊಂದಿರಬೇಕು.
7) ಆಡಳಿತ ಸಹಾಯಕ ದರ್ಜೆ 2 – 05 ಹುದ್ದೆ
ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
8) ಮಾರುಕಟ್ಟೆ ಸಹಾಯಕರು ದರ್ಜೆ 2 – 05 ಹುದ್ದೆ
ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು
9) ಕೆಮಿಸ್ಟ್ ದರ್ಜೆ 2 – 12 ಹುದ್ದೆ
ಬಿ.ಎಸ್ಸಿ ಕೆಮಿಸ್ಟ್ರಿ / ಮೈಕ್ರೋಬಯಾಲಜಿ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
10) ಲೆಕ್ಕ ಸಹಾಯಕ ದರ್ಜೆ 2 – 02 ಹುದ್ದೆ
ಬಿ.ಕಾಂ/ ಬಿಬಿಎಂ/ ಬಿಬಿಎ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
11) ಕಿರಿಯ ತಾಂತ್ರಿಕರು (ಎಲೆಕ್ಟ್ರಿಷನ್) – 06 ಹುದ್ದೆ
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಜೊತೆಗೆ ಇಲೆಕ್ಟ್ರಿಷನ್ ವಿಷಯದಲ್ಲಿ ಎರಡು ವರ್ಷಗಳ ಐಟಿಐ ತೇರ್ಗಡೆಯಾಗಿರಬೇಕು. ಒಂದು ವರ್ಷದ ಶಿಶುಕ್ಷು ತರಬೇತಿ ಹೊಂದಿರಬೇಕು.
12) ಕಿರಿಯ ತಾಂತ್ರಿಕರು (ಎಂ.ಆರ್.ಎ.ಸಿ) – 07 ಹುದ್ದೆ
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಜೊತೆಗೆ ಎಂ.ಆರ್.ಎ.ಸಿ ವಿಷಯದಲ್ಲಿ ಎರಡು ವರ್ಷಗಳ ಐಟಿಐ ತೇರ್ಗಡೆಯಾಗಿರಬೇಕು. ಒಂದು ವರ್ಷದ ಶಿಶುಕ್ಷು ತರಬೇತಿ ಹೊಂದಿರಬೇಕು.
13) ಕಿರಿಯ ತಾಂತ್ರಿಕರು (ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್) – 06 ಹುದ್ದೆ
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಜೊತೆಗೆ ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ವಿಷಯದಲ್ಲಿ ಎರಡು ವರ್ಷಗಳ ಐಟಿಐ ತೇರ್ಗಡೆಯಾಗಿರಬೇಕು. ಒಂದು ವರ್ಷದ ಶಿಶುಕ್ಷು ತರಬೇತಿ ಹೊಂದಿರಬೇಕು.
14) ಕಿರಿಯ ತಾಂತ್ರಿಕರು (ಫಿಟ್ಟರ್) – 06 ಹುದ್ದೆ
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಜೊತೆಗೆ ಫಿಟ್ಟರ್ ವಿಷಯದಲ್ಲಿ ಎರಡು ವರ್ಷಗಳ ಐಟಿಐ ತೇರ್ಗಡೆಯಾಗಿರಬೇಕು. ಒಂದು ವರ್ಷದ ಶಿಶುಕ್ಷು ತರಬೇತಿ ಹೊಂದಿರಬೇಕು.
15) ಕಿರಿಯ ತಾಂತ್ರಿಕರು (ವೆಲ್ಡರ್) – 06 ಹುದ್ದೆ
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಜೊತೆಗೆ ವೆಲ್ಡರ್ ವಿಷಯದಲ್ಲಿ ಎರಡು ವರ್ಷಗಳ ಐಟಿಐ ತೇರ್ಗಡೆಯಾಗಿರಬೇಕು. ಒಂದು ವರ್ಷದ ಶಿಶುಕ್ಷು ತರಬೇತಿ ಹೊಂದಿರಬೇಕು.
16) ಕಿರಿಯ ತಾಂತ್ರಿಕರು (ಬಾಯ್ಲರ್) – 03 ಹುದ್ದೆ
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಜೊತೆಗೆ ದ್ವಿತೀಯ ದರ್ಜೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಆಫ್ ಕಂಪಿಟೆನ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21,400 ರಿಂದ ರೂ. 97,100 ವೇತನ ನೀಡಲಾಗುತ್ತದೆ.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ನಿಗದಿಪಡಿಸಲಾಗಿದೆ ಹಾಗೂ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಉದ್ಯೋಗ ಮಾಹಿತಿ : Canara Bank Recruitment 2021 : 11 ಶಾಖೆಗಳಲ್ಲಿ ಖಾಲಿಯಿರುವ ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗಳ ಭರ್ತಿ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಒಕ್ಕೂಟದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ. 500 ಹಾಗೂ ಇತರೆ ಅಭ್ಯರ್ಥಿಗಳು ರೂ. 800 ಪಾವತಿಸಬೇಕು
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 28, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 28, 2021 ಜೂನ್ 29, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 29, 2021 ಜೂನ್ 30, 2021
DKMUL Recruitment 2021 : Important Links
ಅಧಿಸೂಚನೆ : Click Here
ಅರ್ಜಿಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.