DSRVS India Recruitment 2021 : 433 ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳ ಭರ್ತಿ

DSRVS India Recruitment 2021 : ಡಿಜಿಟಲ್ ಶಿಕ್ಷಾ ಮತ್ತು ರೋಜಗಾರ್ ವಿಕಾಸ್ ಸಂಸ್ಥಾನ್ ಇಂಡಿಯಾದಲ್ಲಿ ಖಾಲಿಯಿರುವ ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DSRVS India Recruitment 2021 : Details of Vacancies

ಹುದ್ದೆ :
• ಡೇಟಾ ಎಂಟ್ರಿ ಆಪರೇಟರ್
• ವೆಬ್ ಡಿಸೈನರ್
• ಕಂಟೆಂಟ್ ರೈಟರ್
• ಕಂಪ್ಯೂಟರ್ ನೆಟ್ವರ್ಕಿಂಗ್ ಟೆಕ್ನಿಷಿಯನ್
• ಆಫೀಸ್ ಅಸಿಸ್ಟೆಂಟ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 433 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆಶೈಕ್ಷಣಿಕ ಅರ್ಹತೆ
ಡೇಟಾ ಎಂಟ್ರಿ ಆಪರೇಟರ್16810+2, ಡಿಪ್ಲೊಮಾ
ವೆಬ್ ಡಿಸೈನರ್15ಪದವಿ/ ಎಂಸಿಎ
ಕಂಟೆಂಟ್ ರೈಟರ್16510+2, ಡಿಪ್ಲೊಮಾ
ಕಂಪ್ಯೂಟರ್ ನೆಟ್ವರ್ಕಿಂಗ್ ಟೆಕ್ನಿಷಿಯನ್46ಪದವಿ/ ಡಿಪ್ಲೊಮಾ
ಆಫೀಸ್ ಅಸಿಸ್ಟೆಂಟ್3910+2, ಡಿಪ್ಲೊಮಾ

ವೇತನ :
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ರೂ. 11,500 ರಿಂದ ರೂ. 19,200ರಂತೆ ವೇತನ ನೀಡಲಾಗುತ್ತದೆ.

ವಯೋಮಾನ :
ದಿನಾಂಕ 20/02/2021ಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉದ್ಯೋಗ

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

DSRVS India Recruitment 2021 : ಡಿಜಿಟಲ್ ಶಿಕ್ಷಾ & ರೋಜಗಾರ್ ವಿಕಾಸ್ ಸಂಸ್ಥಾನ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಡಿಜಿಟಲ್ ಶಿಕ್ಷಾ & ರೋಜಗಾರ್ ವಿಕಾಸ್ ಸಂಸ್ಥಾನ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ~ ರೂ. 550
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ~ ರೂ. 400

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 14, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 20, 2021

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.