
DUDC Chikkamagaluru Recruitment 2026 : ಚಿಕ್ಕಮಗಳೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DUDC Chikkamagaluru Recruitment 2026 : Details of Vacancies
ಹುದ್ದೆ :
ಪೌರಕಾರ್ಮಿಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 29 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ನಗರ ಸ್ಥಳೀಯ ಸಂಸ್ಥೆ | ಹುದ್ದೆಗಳ ಸಂಖ್ಯೆ |
| ನಗರಸಭೆ ಚಿಕ್ಕಮಗಳೂರು | 15 |
| ಪುರಸಭೆ ಕಡೂರು | 3 |
| ಪುರಸಭೆ ತರೀಕೆರೆ | 3 |
| ಪಟ್ಟಣ ಪಂಚಾಯಿತಿ ಮೂಡಿಗೆರೆ | 2 |
| ಪಟ್ಟಣ ಪಂಚಾಯಿತಿ ಶೃಂಗೇರಿ | 3 |
| ಪಟ್ಟಣ ಪಂಚಾಯಿತಿ ಅಜ್ಜಂಪುರ | 3 |
ಅರ್ಹತೆಗಳು :
- ವಿದ್ಯಾರ್ಹತೆ ಅನ್ವಯಿಸುವುದಿಲ್ಲ
- ಕನ್ನಡ ಮಾತನಾಡಲು ಗೊತ್ತಿರಬೇಕು
- ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೌಕರರು.
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2026
ವಯೋಮಿತಿ (31/08/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಗರಿಷ್ಠ 55 ವರ್ಷ ಮೀರಿರಬಾರದು
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಕಛೇರಿಗಳಿಂದ ನಿಗದಿತ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಪಡೆಯುವ ವಿಳಾಸ :
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ, ಹಾಗೂ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಛೇರಿ, ಚಿಕ್ಕಮಗಳೂರು ಅಥವಾ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 30, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026
Chikkamagaluru Poura Karmika Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.